Vijayanagara | ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಪುರಸ್ಕಾರಕ್ಕೆ ಇಂದು ಸಿಬಿಎಸ್‌ಇ ಶಾಲೆಯ ನಾಲ್ವರು ಸ್ಕೌಟ್ಸ್ ವಿದ್ಯಾರ್ಥಿಗಳು ಭಾಜನ
ಕೊಟ್ಟೂರು (ವಿಜಯನಗರ) : ಕೊಟ್ಟೂರಿನ ಇಂದು ಸಿಬಿಎಸ್‌ಇ ಶಾಲೆಯ ನಾಲ್ವರು ಸ್ಕೌಟ್ಸ್ ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ರಾಜ್ಯ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶಾಲೆಯ ವಿದ್ಯಾರ್ಥಿಗಳಾದ ಹೃಷಿಕೇಶ್ ಎಂ.ಡಿ., ಪವನಾಯಕ್ ಟಿ., ಕುಶಾಲ್ ಬಿ.ಎಂ. ಹಾಗೂ ಕವಿಶ್ ಎಸ್. ಸೂರ್ಯವಂಶಿ ಅವರು ಸ್ಕೌಟ್ಸ್ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆ ಹಾಗೂ ಸೇವಾ ಮನೋಭಾವ ಪ್ರದರ್ಶಿಸಿದ್ದಕ್ಕಾಗಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವು ಜು.10ರಂದು ಬೆಂಗಳೂರಿನ ಲೋಕಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಹಿಸಿದ್ದರು.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಣ್ಯರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಅಭಿನಂದಿಸಿದರು.
ರಾಜ್ಯಮಟ್ಟದ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾದ ವಿದ್ಯಾರ್ಥಿಗಳ ಸಾಧನೆಗೆ ಇಂದು ಸಿಬಿಎಸ್‌ಇ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು. ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಹಾಗೂ ಸಾಮಾಜಿಕ ಜೀವನಕ್ಕೆ ಶುಭ ಹಾರೈಸಿದರು.