Vijayanagara | ಅಕ್ರಮವಾಗಿ ಸಾಗಿಸುತ್ತಿದ್ದ 242 ಕೆ.ಜಿ. ಪಡಿತರ ರಾಗಿ ವಶ
ವಿಜಯನಗರ (ಹೊಸಪೇಟೆ) : ಪಿಕೆ ಹಳ್ಳಿ ಕಡೆಯಿಂದ ಹೊಸಪೇಟೆ ಕಡೆಗೆ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಪಡಿತರ ರಾಗಿಯನ್ನು ಅನಧಿಕೃತವಾಗಿ ಸಾಗಿಸುತ್ತಿದ್ದ ವೇಳೆ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಒಟ್ಟು 242 ಕೆ.ಜಿ. ತೂಕದ ರಾಗಿಯನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ರಾಗಿಯ ಅಂದಾಜು ಮೌಲ್ಯ 11,809 ರೂ. ಎಂದು ತಿಳಿಸಲಾಗಿದೆ.
ಪಡಿತರ ರಾಗಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ರಾಗಿ ಸಾಗಾಟಕ್ಕೆ ಬಳಸಿದ್ದ ಟಾಟಾ ಏಸ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ.
ರಾಗಿ ಸಾಗಾಟಕ್ಕೆ ಬಳಸಿದ್ದ ವಾಹನ ಹಾಗೂ ಅದರ ಚಾಲಕನ ವಿರುದ್ಧ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.