ವಿಜಯನಗರ | ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ : ಓರ್ವ ಮೃತ್ಯು
Update: 2026-01-09 23:11 IST
ಮಂಜುನಾಥ
ವಿಜಯನಗರ (ಹೊಸಪೇಟೆ) : ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇನ್ನೊರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸಪೇಟೆಯ ಹೊರವಲಯದ ಭಟ್ರಳ್ಳಿ ಆಂಜನೇಯ ದೇಗುಲದ ಬಳಿ ನಡೆದಿದೆ.
ಮೃತರನ್ನು ಹೊಸಪೇಟೆಯ ಎಂಪಿ ಪ್ರಕಾಶ ನಗರದ ನಿವಾಸಿ ಮಂಜುನಾಥ( 36) ಎಂದು ಗುರುತಿಸಲಾಗಿದೆ.
ಕಾರು ಚಾಲಕ ರವಿ ಗಾಯಗೊಂಡಿದ್ದು, ಪ್ರಾಣ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇಬ್ಬರು ರೈಲ್ವೆ ಸ್ಟೇಷನ್ ಬಳಿ ಹೋಟೆಲ್ ನಲ್ಲಿ ಊಟ ಮುಗಿಸಿಕೊಂಡು ಮನೆಗೆ ಹೋಗುವಾಗ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.