ವಿಜಯನಗರ (ಹೊಸಪೇಟೆ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕನಕ ವೃತ್ತದಲ್ಲಿ ಶುಕ್ರವಾರ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.

ಶಾಸಕ ಎಚ್.ಆರ್.ಗವಿಯಪ್ಪ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಸೇರಿದಂತೆ ಗಣ್ಯರು ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಡಿವೈಎಸ್ಪಿ ಮುರಳೀಧರ, ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ

ವಿಜಯನಗರ ಜಿಲ್ಲಾ ವರದಿಗಾರರು

ಮಹಮ್ಮದ್ ಗೌಸ್ ಅವರು ಕಳೆದ ಆರು ವರ್ಷಗಳಿಂದ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಮಾಧ್ಯಮ ಚಟುವಟಿಕೆಗಳಲ್ಲಿ ಅನುಭವ ಹೊಂದಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ವಿಜಯನಗರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ