Vijayanagara | ಶಾಸಕ ಡಾ.ಶ್ರೀನಿವಾಸ್ ಎನ್.ಟಿ. ಅವರ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ
ಕೂಡ್ಲಿಗಿ/ವಿಜಯನಗರ: ಭಾರತದ ಪ್ರಜಾಪ್ರಭುತ್ವದ ಶಕ್ತಿ ಹಾಗೂ ಪ್ರತಿಯೊಬ್ಬ ನಾಗರಿಕನ ಹಕ್ಕು, ಸ್ವಾತಂತ್ರ್ಯ ಮತ್ತು ಗೌರವದ ಪ್ರತೀಕವಾದ ಸಂವಿಧಾನವನ್ನು ಸ್ಮರಿಸುವ ಸಂವಿಧಾನ ದಿನಾಚರಣೆಯನ್ನು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರ ಸಾರ್ವಜನಿಕ ಸಂಪರ್ಕ ಕಚೇರಿಯಲ್ಲಿ ಗೌರವಪೂರ್ವಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯ ಆಶಯಗಳನ್ನು ಸ್ಮರಿಸಲಾಯಿತು. ನ್ಯಾಯ, ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಸಂಕಲ್ಪ ಮಾಡಲಾಯಿತು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಸಂವಿಧಾನ ರಚನೆಯಲ್ಲಿ ಮಹತ್ವದ ಕೊಡುಗೆ ನೀಡಿದ ಮಹನೀಯರನ್ನು ಗೌರವಪೂರ್ವಕವಾಗಿ ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ವೆಂಕಟೇಶ್, ಕಾಟರ್ ಲಂಕೇಶ್ ಹಾಗೂ ಶಾಸಕರ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.