Vijayanagara | ಕೊಟ್ಟೂರು ತಾಲೂಕು ಕಚೇರಿಯಲ್ಲಿ ಸರಳವಾಗಿ ಸಂವಿಧಾನ ದಿನಾಚರಣೆ
ಕೊಟ್ಟೂರು (ವಿಜಯನಗರ): ಕೊಟ್ಟೂರು ತಾಲೂಕು ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಗುರುವಾರ ಸಂವಿಧಾನ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ಅವರ ಉಪಸ್ಥಿತಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಯಿತು. ಬಳಿಕ ಸಂವಿಧಾನದ ಪ್ರಸ್ತಾವನೆಯನ್ನು ಓದಿ, ಅದರ ಆಶಯಗಳನ್ನು ಪಾಲಿಸುವ ಪ್ರತಿಜ್ಞೆ ಕೈಗೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಮುಖಂಡರಾದ ತೆಗ್ಗಿ ನಕೇರಿ, ಕೊಟ್ರೇಶ್, ಬದ್ದಿ ಮರಿಸ್ವಾಮಿ, ತಾಲೂಕು ಬಿ.ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷ ಬದ್ದಿ ದುರ್ಗಪ್ಪ, ವಕೀಲರಾದ ಅಂಜನೇಯ, ಎಂ.ಎಂ. ರಫೀಕ್, ಶಿವಶಂಕರ, ಎಸ್. ರೇಖಾ, ಕಂದಾಯ ನಿರೀಕ್ಷಕರು ಹಾಗೂ ತಾಲೂಕು ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.