×
Ad

ವಿಜಯನಗರ | ಗಣರಾಜ್ಯೋತ್ಸವದಲ್ಲಿ ಗಾಂಧಿ–ಅಂಬೇಡ್ಕರ್ ಭಾವಚಿತ್ರ ನಿರ್ಲಕ್ಷ್ಯ ಆರೋಪ : ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಡಿಎಸ್ಎಸ್ ಮನವಿ

Update: 2026-01-29 20:27 IST

ವಿಜಯನಗರ/ಹೊಸಪೇಟೆ : ಬಳ್ಳಾರಿಯ ಬಿಜೆಪಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಇರಿಸದೇ ಕಾರ್ಯಕ್ರಮ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಹಾಗೂ ಜಿಲ್ಲಾ ಬಿಜೆಪಿ ಘಟಕದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿಜಯನಗರ ಜಿಲ್ಲಾ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ರಾಜ್ಯ ಸಂಘಟನಾ ಸಂಚಾಲಕ ವೈ. ರಾಮಚಂದ್ರ ಬಾಬು, ರಾಜ್ಯ ಸರ್ಕಾರದ ಆದೇಶದಂತೆ ಗಣರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಮಹಾತ್ಮ ಗಾಂಧೀಜಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂಬ ನಿಯಮವಿದ್ದರೂ, ಉದ್ದೇಶಪೂರ್ವಕವಾಗಿ ಇಬ್ಬರು ಮಹಾನ್ ನಾಯಕರನ್ನು ನಿರ್ಲಕ್ಷಿಸಲಾಗಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಕಾರ್ಯಕ್ರಮ ಆಯೋಜಿಸಿದವರು ಹಾಗೂ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಸೇರಿದಂತೆ ಜಿಲ್ಲಾ ಬಿಜೆಪಿ ಘಟಕದ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮುಖ್ಯಮಂತ್ರಿ ಅವರಿಗೆ, ವಿಜಯನಗರ ಜಿಲ್ಲಾಧಿಕಾರಿಗಳ ಮುಖಾಂತರ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಸಿ. ರಮೇಶ್, ಪದಾಧಿಕಾರಿಗಳಾದ ಸಿ. ಗೋವಿಂದರಾಜ್, ರಾಮಕೃಷ್ಣ, ಕೆ. ವೆಂಕೋಬ, ವೈ. ವೆಂಕಟೇಶ್, ಹಸೇನ್, ಹುಸೇನ್, ಅಕ್ಬರ್, ಮಾಬು, ಚಿನ್ನಿ, ರವಿ, ಸಂದೀಪ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News