ವಿಜಯನಗರ (ಹೊಸಪೇಟೆ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಅ. 2ರಂದು ಬೆಳಿಗ್ಗೆ 10 ಗಂಟೆಗೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುವುದು ಎಂದು ತಿಳಿಸಲಾಗಿದೆ.

ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಧನಂಜಯ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor