Vijayanagara | ಹೊಸಪೇಟೆಯಲ್ಲಿ ಇಂದಿರಾ ಗಾಂಧಿ ಜನ್ಮದಿನಾಚರಣೆ
ಹೊಸಪೇಟೆ/ವಿಜಯನಗರ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿರಾಜ್ ಶೇಕ್ ಅವರ ನಿರ್ದೇಶನದ ಮೇರೆಗೆ ಭಾರತದ ಮಾಜಿ ಪ್ರಧಾನಿ, ಭಾರತ ರತ್ನ ಪುರಸ್ಕೃತೆ ಹಾಗೂ ‘ಉಕ್ಕಿನ ಮಹಿಳೆ’ ಎಂದೇ ಖ್ಯಾತರಾದ ದಿವಂಗತ ಇಂದಿರಾ ಗಾಂಧಿ ಅವರ ಜನ್ಮದಿನವನ್ನು ಗುರುವಾರ ಆಚರಿಸಲಾಯಿತು.
ನಗರದ ಮುನ್ಸಿಪಲ್ ಹೈಸ್ಕೂಲ್ ಮುಂಭಾಗದಲ್ಲಿರುವ ಇಂದಿರಾ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ. ರಮೇಶ್, ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಲಿಂಗಣ್ಣ ನಾಯಕ, ಜಿಲ್ಲಾ ಸೇವಾದಳ ಅಧ್ಯಕ್ಷ ಬಿ. ಮಾರಣ್ಣ, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಡಿ. ವೆಂಕಟರಮಣ, ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಪಿ. ವೆಂಕಟೇಶಲು, ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿ ಭಾಸ್ಕರ್, ಜಿಲ್ಲಾ ಉಪಾಧ್ಯಕ್ಷ ಜಂಗ್ಲಿಯಪ್ಪ, ತಾಲೂಕು ಕಾರ್ಮಿಕ ವಿಭಾಗದ ಅಧ್ಯಕ್ಷ ಎಂ.ಡಿ. ರಫೀಕ್, ದ್ವಿಚಕ್ರ ವಾಹನ ವಿಭಾಗದ ಜಿಲ್ಲಾಧ್ಯಕ್ಷ ಅಕ್ಬರ್ ಬೇಗ, ಆಲನ್ ಭಕ್ಷಿ, ಟಿ. ತಾರಾಬಾಷಾ, ಅಲ್ಪಸಂಖ್ಯಾತರ ಆಯೋಗದ ಜಿಲ್ಲಾ ಸದಸ್ಯ ಅಂತೋನಿ ದಾಸ್, ಸಂಗಪ್ಪ, ಪೀರಾಸಾಬ್, ಸಿ. ಮುನಿಯಪ್ಪ, ಚಿತವಾಡ್ಗಿ ಖಾಜಾ ಹುಸೇನ್, ಯೇಸು ಪಾದಂ, ಸಿ.ಆರ್. ಭರತ್ ಕುಮಾರ್, ಶಿವಕುಮಾರ್, ಸೋಹಿಲ್ ಹಾಗೂ ಸೇವಾದಳದ ಕುಬೇರಪ್ಪ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.