×
Ad

Vijayanagara | ಟಿಎಂಎಇಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಜ್ಲಾನ್ ಕ್ಯಾಂಪಸ್ ಸಂದರ್ಶನ

Update: 2026-05-15 21:51 IST

ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳ್ಳಾರಿ ರಸ್ತೆಯಲ್ಲಿರುವ ಟಿಎಂಎಇಎಸ್ ಪಾಲಿಟೆಕ್ನಿಕ್ (ಸರ್ಕಾರಿ ಅನುದಾನಿತ) ಕಾಲೇಜಿನಲ್ಲಿ ಮೇ 15ರಂದು ಸುಜ್ಲಾನ್ ಸಂಸ್ಥೆಯ ಕ್ಯಾಂಪಸ್ ಸಂದರ್ಶನ ಯಶಸ್ವಿಯಾಗಿ ನಡೆಯಿತು.

ಕರ್ನಾಟಕ ವಿಭಾಗದ ಅಧಿಕಾರಿ ರಾಘವೇಂದ್ರ ಪ್ರಸಾದ್ ಡಿ.ಜೆ. ಹಾಗೂ ಆಂಧ್ರ ಪ್ರದೇಶ ವಿಭಾಗದ ಅಧಿಕಾರಿ ಸುಭಾನಿ ಅವರು ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಕ್ಯಾಂಪಸ್ ಸಂದರ್ಶನದಲ್ಲಿ ವಿದ್ಯುತ್, ಯಾಂತ್ರಿಕ, ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗಗಳ ವಿದ್ಯಾರ್ಥಿಗಳು ಮತ್ತು ಪದವೀಧರರು ಭಾಗವಹಿಸಿದರು. ಒಟ್ಟು 46 ವಿದ್ಯಾರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಸಂದರ್ಶನದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿತು. ಸುಜ್ಲಾನ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಲಿ ಎಂದು ಪ್ರಾಂಶುಪಾಲರು ಹಾಗೂ ಪ್ಲೇಸ್ಮೆಂಟ್ ಸೆಲ್ ಶುಭ ಹಾರೈಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News