×
Ad

Vijayanagara | 97 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ

Update: 2026-07-15 20:03 IST

ಕೂಡ್ಲಿಗಿ/ವಿಜಯನಗರ : ತಾಲೂಕಿನ ರಾಮದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 97 ಲಕ್ಷ ರೂ. ವೆಚ್ಚದ ರಸ್ತೆ, ಚರಂಡಿ ಹಾಗೂ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಭೂಮಿಪೂಜೆ ನೆರವೇರಿಸಲಾಯಿತು.

ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ವೇಳೆ ಕುದುರೆಡುವ ಗ್ರಾಮದ 3.5 ಕಿ.ಮೀ. ಉದ್ದದ ಬೊಮ್ಮಗಟ್ಟೆ–ಸಂಡೂರು ಗಡಿ ಸಂಪರ್ಕ ಮಣ್ಣಿನ ರಸ್ತೆ ನಿರ್ಮಾಣ ಕಾಮಗಾರಿಗೂ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ನರಸಿಂಹಗಿರಿ ವೆಂಕಟೇಶ್, ಕುದುರೆಡುವ ಮಂಜಣ್ಣ, ಪ್ರಸನ್ನ ಕುಮಾರ್, ರಾಮದುರ್ಗ ಸರ್ಮಸ್ ಹುಸೇನ್, ರವಿ ಕುಮಾರ್, ಮಾಜಿ ಅಧ್ಯಕ್ಷ ರಾಜಣ್ಣ, ಅಂಜಿನಪ್ಪ, ಪಂಚಾಯಿತಿ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News