×
Ad

ವಿಜಯನಗರ | ಮೇ 7 ರಿಂದ ಲೋಕಾಯುಕ್ತ ಜನ ಸಂಪರ್ಕ ಸಭೆ

Update: 2025-05-05 19:02 IST

ವಿಜಯನಗರ(ಹೊಸಪೇಟೆ) : ಕರ್ನಾಟಕ ಲೋಕಾಯುಕ್ತ ಹೊಸಪೇಟೆ ಘಟಕದಿಂದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ಮೇ 7ರಿಂದ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಜನ ಸಂಪರ್ಕ ಸಭೆ ನಡೆಯಲಿವೆ.

ಮೇ 7 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಕೊಟ್ಟೂರು ತಾಲೂಕು ಕಚೇರಿ ಸಭಾಂಗಣದಲ್ಲಿ, ಮೇ.12 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಕೂಡ್ಲಿಗಿ ತಾಲೂಕು ಕಚೇರಿ ಸಭಾಂಗಣ, ಮೇ 20 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಹರಪನಹಳ್ಳಿ ತಾಲೂಕು ಕಚೇರಿ ಸಭಾಂಗಣದಲ್ಲಿ ಜನಸಂಪರ್ಕ ಸಭೆಗಳು ನಡೆಯಲಿದೆ.

ಸಾರ್ವಜನಿಕರು ತಮ್ಮ ಕುಂದುಕೊರತೆಗಳು, ಅಹವಾಲುಗಳು ಹಾಗೂ ತಮ್ಮ ಸರಕಾರಿ ಕೆಲಸಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಕಚೇರಿಗಳಲ್ಲಿ ಅನಗತ್ಯ ವಿಳಂಬ, ಕಿರುಕುಳ, ತೊಂದರೆ ಮತ್ತು ಅಧಿಕಾರಿ ಸಿಬ್ಬಂದಿಯ ದುರಾಡಳಿತಕ್ಕೆ ಸಂಬಂಧಿಸಿದ ದೂರುಗಳನ್ನು ಸಂಬಂಧಿಸಿದ ತಾಲೂಕುಗಳಲ್ಲಿ ಆಯಾ ದಿನಾಂಕದಂದು ದ್ವಿಪ್ರತಿಯಲ್ಲಿ ದೂರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಹೊಸಪೇಟೆ ಘಟಕದ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News