ವಿಜಯನಗರ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಂಕರ್ ನಾಯಕ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ
Update: 2025-12-16 09:43 IST
ಹೊಸಪೇಟೆ : ನಗರದ ಜಂಬೂನಾಥ ರಸ್ತೆಯಲ್ಲಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಂಕರ್ ನಾಯಕ್ ಅವರ ಮನೆ ಮತ್ತು ಕಚೇರಿಯ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ ಎಂದು ವರದಿಯಾಗಿದೆ.
ವಿಜಯನಗರ ಲೋಕಾಯುಕ್ತ ಡಿವೈಎಸ್ಪಿ, ಸಚಿನ್, ಪಿಐ ಅಮರೇಶ್, ರಾಜೇಶ್ ಲಮಾಣಿ, ಬಳ್ಳಾರಿ ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆಯಿಂದಲೂ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.