Vijayanagara | ಶಿಕ್ಷಕಿ ಜಿ.ಸರೋಜಗೆ ರಾಷ್ಟ್ರ ಮಟ್ಟದ ‘ಶಿಕ್ಷಕ ರತ್ನ’ ಪ್ರಶಸ್ತಿ
Update: 2026-07-15 12:08 IST
ಕೊಟ್ಟೂರು/ಉಜ್ಜಯಿನಿ (ವಿಜಯನಗರ) : ಶೈಕ್ಷಣಿಕ ಪ್ರಗತಿ, ವಿನೂತನ ಹಾಗೂ ಪರಿಣಾಮಕಾರಿ ಬೋಧನಾ ವಿಧಾನಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಲ್ಲಿ ಶಾಶ್ವತ ಕಲಿಕೆ ಮತ್ತು ಮೌಲ್ಯಾಧಾರಿತ ಶಿಕ್ಷಣವನ್ನು ಬೆಳೆಸುವಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಉಜ್ಜಯಿನಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜಿ. ಸರೋಜ ಅವರಿಗೆ ರಾಷ್ಟ್ರ ಮಟ್ಟದ ‘ಶಿಕ್ಷಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಹುಬ್ಬಳ್ಳಿಯ ಬೆಳಕು ಸಾಹಿತಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ 125ನೇ ಬೆಳಕು ಸಮ್ಮೇಳನದಲ್ಲಿ ಭಾನುವಾರ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಿಗೆ ಸುಲಭ ಹಾಗೂ ಪರಿಣಾಮಕಾರಿ ಕಲಿಕೆಯನ್ನು ಒದಗಿಸುವ ನವೀನ ಬೋಧನಾ ವಿಧಾನಗಳನ್ನು ಅಳವಡಿಸಿಕೊಂಡು, ಮೌಲ್ಯಾಧಾರಿತ ಶಿಕ್ಷಣ ಮತ್ತು ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ.