ಹೊಸಪೇಟೆ/ವಿಜಯನಗರ: ನಗರದ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯಕ್ಕೆ ರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಪ್ರಾಧಿಕಾರದ (ಎನ್‌ಡಿಎಸ್‌ಎ) ಅಧಿಕಾರಿಗಳ ತಂಡ ಗುರುವಾರ ಭೇಟಿ ನೀಡಿ, ಜಲಾಶಯದ ನೂತನ ಹೆಚ್ಚುವರಿ ನೀರು ಹರಿಸುವ ಗೇಟ್‌ಗಳ ಕಾಮಗಾರಿ ಹಾಗೂ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಶೀಲಿಸಿತು.

ಜಲಾಶಯದಲ್ಲಿ ಕೈಗೊಳ್ಳಲಾಗುತ್ತಿರುವ ಹೊಸ ಸ್ಪಿಲ್‌ವೇ ಗೇಟ್‌ಗಳ ಕಾಮಗಾರಿಯ ಪ್ರಗತಿ, ಸುರಕ್ಷತಾ ಕ್ರಮಗಳು ಹಾಗೂ ನೀರಿನ ಸಂಗ್ರಹದ ಸ್ಥಿತಿಗತಿಗಳ ಕುರಿತು ಅಧಿಕಾರಿಗಳ ತಂಡ ಮಾಹಿತಿ ಪಡೆದುಕೊಂಡಿತು. ಕಾಮಗಾರಿಯ ವಿವಿಧ ಹಂತಗಳನ್ನು ಪರಿಶೀಲಿಸಿ, ಜಲಾಶಯದ ಸುರಕ್ಷತೆಗೆ ಸಂಬಂಧಿಸಿದ ಅಂಶಗಳನ್ನೂ ಅವಲೋಕಿಸಿತು.

ಈ ಸಂದರ್ಭದಲ್ಲಿ ತುಂಗಭದ್ರಾ ಮಂಡಳಿಯ ಕಾರ್ಯದರ್ಶಿ ಶ್ರೀನಿವಾಸು ಬೈರಿ, ಅಧೀಕ್ಷಕ ಎಂಜಿನಿಯರ್ (ಎಸ್‌ಇ), ಕಾರ್ಯನಿರ್ವಾಹಕ ಎಂಜಿನಿಯರ್ (ಇಇ), ಉಪವಿಭಾಗಾಧಿಕಾರಿ (ಎಸ್‌ಡಿಒ) ಹಾಗೂ ವಿಭಾಗಾಧಿಕಾರಿ (ಎಸ್‌ಒ) ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ

ವಿಜಯನಗರ ಜಿಲ್ಲಾ ವರದಿಗಾರರು

ಮಹಮ್ಮದ್ ಗೌಸ್ ಅವರು ಕಳೆದ ಆರು ವರ್ಷಗಳಿಂದ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಮಾಧ್ಯಮ ಚಟುವಟಿಕೆಗಳಲ್ಲಿ ಅನುಭವ ಹೊಂದಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ವಿಜಯನಗರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ