×
Ad

ವಿಜಯನಗರ | ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Update: 2025-12-18 21:49 IST

ವಿಜಯನಗರ(ಹೊಸಪೇಟೆ), ಡಿ.18: ಜಿಲ್ಲಾದ್ಯಾಂತ ಡಿ.21 ರಿಂದ 25 ರವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಸಲಿಕೆ ಕಾರ್ಯಕ್ರಮದ ಪೋಸ್ಟರ್ ಗಳನ್ನು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಬುಧವಾರ ಸಂಜೆ ಬಿಡುಗಡೆಗೊಳಿಸಿದರು.

ಬಳಿಕ ಅವರು ಮಾತನಾಡಿ, ಐದು ವರ್ಷದೊಳಗಿನ ಯಾವುದೇ ಮಕ್ಕಳ ಪಲ್ಸ್ ಪೋಲಿಯೋ ಲಸಿಕೆಯಿಂದ ವಂಚಿತರಾಗದoತೆ ನಿಗಾ ವಹಿಸಿಬೇಕು. ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ಜಿಲ್ಲೆಯ 100 ರಷ್ಟು ಪ್ರತಿಶತ ಸಾಧನೆ ಮಾಡಬೇಕು. ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ಇಲಾಖೆಗಳು ಸದರಿ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಹಾಕಿಸಿದ್ದರೂ, ಈ ಸುತ್ತಿನಲ್ಲಿ ಮತ್ತೆ ಪೋಲಿಯೋ ಹನಿ ಹಾಕಿಸಿಕೊಳ್ಳುವುದರ ಮೂಲಕ ಪೋಲಿಯೋ ನಿರ್ಮೂಲನೆಗೆ ಸಾರ್ವಜನಿಕರು ಸಹಕರಿಸುಂತೆ ಮನವಿ ಮಾಡಿದರು.

ಒಟ್ಟಾರೆಯಾಗಿ ಜಿಲ್ಲೆಯ 1,39,55,179 ಜನಸಂಖ್ಯೆಯಿದ್ದು, ಇದರಲ್ಲಿ 1,31,363 ಐದು ವರ್ಷದೊಳಗಿನ ಮಕ್ಕಳು ಇದ್ದರೆ. ಈ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಲು 1,047 ಬೂತ್ ಗಳು ಮತ್ತು 912 ಮನೆಗಳಿಗೆ ತೆರಳಿ ಪೋಲಿಯೋ ಹನಿ ಹಾಕಲು ತಂಡಗಳನ್ನು ರಚಿಸಲಾಗಿದೆ. ಕಾರ್ಯಕ್ರಮದಲ್ಲಿ 2,172 ಲಸಿಕಾದಾರರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಆರ್‌ಸಿಹೆಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಪಂಚಾಯತ್‌ ಸಂಯೋಜಕ ಜೆ.ಎಂ.ಅನ್ನದಾನ ಸ್ವಾಮಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಿ.ಟಿ.ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಶ್ವೇತಾ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮನೋಹರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ.ಕಾಳೆ, ಅಹಾರ ಇಲಾಖೆ ಉಪನಿರ್ದೇಶಕ ರಿಯಾಝ್‌ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News