ವಿಜಯನಗರ (ಹೊಸಪೇಟೆ) : ಪರಿಸರ ಮಾಲಿನ್ಯದಿಂದ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟುವುದರ ಜೊತೆಗೆ ಸಾರ್ವಜನಿಕರಲ್ಲಿ ಪರಿಸರ ಸಂರಕ್ಷಣೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿಜಯನಗರ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ ಬುಧವಾರ ಜನಜಾಗೃತಿ ಜಾಥಾ ಆಯೋಜಿಸಲಾಗಿತ್ತು.

ನಗರದ ಗಾಂಧಿ ವೃತ್ತದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಹಸಿರು ನಿಶಾನೆ ತೋರುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು.

ಜಾಥಾದಲ್ಲಿ ಶಿಕ್ಷಣ ಮತ್ತು ಸಾರಿಗೆ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ, ಆಟೋ ಚಾಲಕರು, ಶಾಲಾ ಮಕ್ಕಳು ಸೇರಿದಂತೆ ವಿವಿಧ ಇಲಾಖೆಗಳ ಪ್ರತಿನಿಧಿಗಳು ಭಾಗವಹಿಸಿ ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು. ಪರಿಸರ ಮಾಲಿನ್ಯದಿಂದ ಮಾನವನ ಆರೋಗ್ಯ, ಜೀವವೈವಿಧ್ಯ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಸ್ವಚ್ಛ, ಸುಂದರ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವ ಅಗತ್ಯವಾಗಿದೆ. ಪರಿಸರ ಸಂರಕ್ಷಣೆಯನ್ನು ದೈನಂದಿನ ಜೀವನದ ಭಾಗವಾಗಿಸಿಕೊಳ್ಳಬೇಕು ಎಂಬ ಸಂದೇಶವನ್ನು ಜಾಥಾದ ಮೂಲಕ ಸಾರಲಾಯಿತು.

ಈ ಸಂದರ್ಭದಲ್ಲಿ ಆರ್‌ಟಿಒ ದಾಮೋದರ್, ಡಿವೈಎಸ್‌ಪಿ ಮುರುಳಿಧರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ

ವಿಜಯನಗರ ಜಿಲ್ಲಾ ವರದಿಗಾರರು

ಮಹಮ್ಮದ್ ಗೌಸ್ ಅವರು ಕಳೆದ ಆರು ವರ್ಷಗಳಿಂದ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಮಾಧ್ಯಮ ಚಟುವಟಿಕೆಗಳಲ್ಲಿ ಅನುಭವ ಹೊಂದಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ವಿಜಯನಗರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ