ವಿಜಯನಗರ | ಪಡಿತರ ಇ-ಕೆವೈಸಿ ಕಡ್ಡಾಯ : ಅ.20 ಅಂತಿಮ ದಿನಾಂಕ
ಹೊಸಪೇಟೆ : ವಿಜಯನಗರ ಜಿಲ್ಲೆಯಲ್ಲಿ ಪಡಿತರ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ, 5 ವರ್ಷ ಪೂರೈಸಿದ ಮತ್ತು ಇದುವರೆಗೆ ಇ-ಕೆವೈಸಿ ಮಾಡಿಸದೇ ಬಾಕಿ ಉಳಿದಿರುವ 3,09,645 ಪಡಿತರ ಚೀಟಿ ಫಲಾನುಭವಿಗಳು ಅಕ್ಟೋಬರ್ 20 ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
ಫಲಾನುಭವಿಗಳು ಯಾವುದೇ ಶುಲ್ಕ ನೀಡಬೇಕಿಲ್ಲ. ಸಂಪೂರ್ಣವಾಗಿ ಉಚಿತವಾಗಿ ತಮ್ಮ ಹತ್ತಿರದ ಯಾವುದೇ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬಹುದು ಎಂದು ಹೇಳಿದರು.
ಬಾಕಿ ಇರುವ ಇ-ಕೆವೈಸಿ ವಿವರ:
ಜಿಲ್ಲೆಯಲ್ಲಿ ಒಟ್ಟು 3,09,645 ಸದಸ್ಯರ ಇ-ಕೆವೈಸಿ ಮಾಡಿಸುವುದು ಬಾಕಿ ಇದ್ದು, ಅದರಲ್ಲಿ ಹರಪನಹಳ್ಳಿ ತಾಲ್ಲೂಕಿನಲ್ಲಿ 74,783, ಹೊಸಪೇಟೆ 70,978, ಹಡಗಲಿ 56,598, ಕೂಡ್ಲಿಗಿ 47,914, ಹಗರಿಬೊಮ್ಮನಹಳ್ಳಿ 41,887, ಕೊಟ್ಟೂರು 17,485 ಫಲಾನುಭವಿಗಳು ಕೆ-ವೈಸಿ ಬಾಕಿ ಉಳಿದಿವೆ. ಆದ್ದರಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಬಾಕಿ ಇರುವ ಫಲಾನುಭವಿಗಳ ಪಟ್ಟಿಯನ್ನು ಪ್ರಕಟಿಸಲು ಈ ಕುರಿತು ವ್ಯಾಪಕ ಜಾಗೃತಿ ಮೂಡಿಸಿ ಗರಿಷ್ಠ ಪ್ರಮಾಣದಲ್ಲಿ ಇ-ಕೆವೈಸಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಕಟಣೆಯಲ್ಲಿ ಸೂಚಿಸಿದೆ.