×
Ad

Vijayanagara | ಮೊಹರಂ ಹಬ್ಬದ ಹಿನ್ನೆಲೆ ಜೂ.25ರಂದು ಮದ್ಯ ಮಾರಾಟ ನಿಷೇಧ

Update: 2026-06-24 18:48 IST

ಸಾಂದರ್ಭಿಕ ಚಿತ್ರ

ವಿಜಯನಗರ (ಹೊಸಪೇಟೆ) : ಜಿಲ್ಲಾದ್ಯಂತ ಜೂ.25 ರಿಂದ 27ರವರೆಗೆ ಮೊಹರಂ ಹಬ್ಬ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜೂ.25ರ ಬೆಳಗ್ಗೆ 6 ಗಂಟೆಯಿಂದ ಜೂ.26ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ.

ಆದೇಶದ ಪ್ರಕಾರ, ಕೆಎಸ್‌ಬಿಸಿಎಲ್ ಡಿಪೋಗಳನ್ನು ಹೊರತುಪಡಿಸಿ ಜಿಲ್ಲೆಯ ಎಲ್ಲಾ ಮದ್ಯದಂಗಡಿಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳು ಹಾಗೂ ಇತರೆ ಸ್ಥಳಗಳಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಮೊಹರಂ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಹಾಗೂ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News