Vijayanagara | ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ಯಾಮ್ ಬಿ.ಗೆ. ಯೋಗಾಸನದಲ್ಲಿ ಪ್ರಥಮ ಸ್ಥಾನ
ಹಗರಿಬೊಮ್ಮನಹಳ್ಳಿ/ವಿಜಯನಗರ: ಮೈಸೂರಿನಲ್ಲಿ ಅ.11ರಿಂದ 14ರವರೆಗೆ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟ ‘ಸಿಎಂ ಕಪ್–2026’ರಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಕೆಂಚಟನಹಳ್ಳಿ ಗ್ರಾಮದ ವಿದ್ಯಾರ್ಥಿ ಶ್ಯಾಮ್ ಬಿ. ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾನೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕ್ರೀಡಾ ಪ್ರಾಧಿಕಾರದ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಶ್ಯಾಮ್ ತನ್ನ ಯೋಗಾಸನದ ಪ್ರತಿಭೆಯನ್ನು ಪ್ರದರ್ಶಿಸಿ ಮೊದಲ ಸ್ಥಾನ ಪಡೆದು ಗಮನ ಸೆಳೆದಿದ್ದಾನೆ. ಕೆಂಚಟನಹಳ್ಳಿ ಗ್ರಾಮದ ದುರುಗಪ್ಪ ಅವರ ಪುತ್ರನಾದ ಶ್ಯಾಮ್ನ ಈ ಸಾಧನೆ ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳಿಗೆ ಪ್ರೇರಣೆಯಾಗಿದೆ.
ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವ ಶ್ಯಾಮ್ನ ಸಾಧನೆಗೆ ಗ್ರಾಮಸ್ಥರು ಹಾಗೂ ಕ್ರೀಡಾಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಯ ಮುಂದಿನ ಕ್ರೀಡಾ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.