×
Ad

Vijayanagara | ಎಸ್‌ಐಆರ್‌ : ಜಿಲ್ಲೆಯಲ್ಲಿ ಶೇ.95.11 ರಷ್ಟು ಗಣತಿ ನಮೂನೆಗಳ ವಿತರಣೆ

Update: 2026-07-06 22:04 IST

ಹೊಸಪೇಟೆ : ವಿಜಯನಗರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಚುರುಕುಗೊಂಡಿದ್ದು, ಈವರೆಗೆ ಒಟ್ಟು 10,86,898 ಗಣತಿ ನಮೂನೆಗಳನ್ನು ವಿತರಿಸುವ ಮೂಲಕ ಶೇ.95.11ರಷ್ಟು ಪ್ರಗತಿ ಸಾಧಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 11,42,732 ಮತದಾರರು ನೋಂದಾಯಿತರಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದಾರೆ. ಈಗಾಗಲೇ ಶೇ.94ರಷ್ಟು ಮತದಾರರ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದೆ.

ಜೂನ್ 30ರಿಂದ ಆರಂಭಗೊಂಡಿರುವ ಎಸ್‌ಐಆರ್ ಅಭಿಯಾನ ಜುಲೈ 29ರವರೆಗೆ ಮುಂದುವರಿಯಲಿದ್ದು, ಈ ಅವಧಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಣೆ ಹಾಗೂ ಡಿಜಿಟಲೀಕರಣ ಕಾರ್ಯ ನಡೆಯಲಿದೆ.

ವಿತರಿಸಲಾದ ನಮೂನೆಗಳ ಪೈಕಿ 71,306 (ಶೇ.6.24) ಅರ್ಜಿಗಳನ್ನು ಈಗಾಗಲೇ ಡಿಜಿಟಲೀಕರಣಗೊಳಿಸಲಾಗಿದೆ. ಅಲ್ಲದೆ, 806 ಮತದಾರರು ಸ್ವಯಂ ಆನ್‌ಲೈನ್ ಮೂಲಕ ತಮ್ಮ ನಮೂನೆಗಳನ್ನು ಸಲ್ಲಿಸಿದ್ದಾರೆ.

ಬಿಎಲ್‌ಒಗಳ ಪರಿಶೀಲನೆಯಲ್ಲಿ 668 ಮೃತ ಮತದಾರರು ಹಾಗೂ 343 ಖಾಯಂ ಸ್ಥಳಾಂತರಗೊಂಡ ಮತದಾರರನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ. ಅವರು ಉಳಿದ ಮತದಾರರು ಅಗತ್ಯ ದಾಖಲೆಗಳೊಂದಿಗೆ ಗಣತಿ ನಮೂನೆಗಳನ್ನು ಭರ್ತಿ ಮಾಡಿ ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News