×
Ad

Vijayanagara | ಎಸ್‌ಐಆರ್ ಪ್ರಕ್ರಿಯೆ ಅನುಷ್ಠಾನಕ್ಕೆ ಬಿಎಲ್‌ಒಗಳಿಗೆ ತರಬೇತಿ

Update: 2026-07-01 20:06 IST

ಕೊಟ್ಟೂರು/ವಿಜಯನಗರ : ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳು (ಬಿಎಲ್‌ಒ) ಹಾಗೂ ಬಿಎಲ್‌ಒ ಮೇಲ್ವಿಚಾರಕರಿಗೆ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಬಿಎಲ್‌ಒ ತಂತ್ರಾಂಶದಲ್ಲಿ ನಿರ್ವಹಿಸುವ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು.

ಪಟ್ಟಣದ ತಾಲೂಕು ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಆಯೋಜಿಸಿದ್ದ ತರಬೇತಿಯಲ್ಲಿ ಮಾಸ್ಟರ್ ಟ್ರೈನರ್ ಮುಸ್ತಾಕ್ ಅಹ್ಮದ್ ಅವರು, ಮತದಾರರಿಗೆ ವಿತರಿಸುವ ಎನ್ಯುಮರೇಷನ್ ಫಾರಂ ಅನ್ನು ಸರಿಯಾಗಿ ಭರ್ತಿ ಮಾಡಿಸುವ ವಿಧಾನ, ಭರ್ತಿಯಾದ ಅರ್ಜಿಗಳನ್ನು ಪರಿಶೀಲಿಸಿ ಬಿಎಲ್‌ಒ ತಂತ್ರಾಂಶದಲ್ಲಿ ಮಾಹಿತಿ ದಾಖಲಿಸಿ ಅಪ್‌ಲೋಡ್ ಮಾಡುವ ಕ್ರಮ ಸೇರಿದಂತೆ ಎಸ್‌ಐಆರ್ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿ ನೀಡಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಪಾರದರ್ಶಕವಾಗಿ ಹಾಗೂ ದೋಷರಹಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಚುನಾವಣೆ ವಿಷಯ ನಿರ್ವಾಹಕರಾದ ಆದರ್ಶ, ಮುಸ್ತಾಫ್ ಹಾಗೂ ಕಂದಾಯ ನಿರೀಕ್ಷಕ ಡಿ. ಶಿವಕುಮಾರ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News