Vijayanagara | ಸಾಲಬಾಧೆ ತಾಳಲಾರದೆ ವ್ಯಕ್ತಿ ಆತ್ಮಹತ್ಯೆ
Update: 2026-06-02 20:15 IST
ವೆಂಕಟೇಶ್
ವಿಜಯನಗರ /ಕೊಟ್ಟೂರು: ಸಾಲಬಾಧೆಯಿಂದ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಟ್ಟೂರು ತಾಲೂಕಿನ ಚಿರಬಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಅವರು ಕೊಟ್ಟೂರಿನ ಖಾಸಗಿ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದಿದ್ದು, ಸಾಲ ತೀರಿಸಲಾಗದೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ.
ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಸಂಬಂಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.