×
Ad

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಡಿ. 20ರಂದು ವಿಜಯನಗರಕ್ಕೆ ಭೇಟಿ

Update: 2025-12-19 22:58 IST

ನಿರ್ಮಲಾ ಸೀತಾರಾಮನ್ | Photo Credit : PTI

ವಿಜಯನಗರ, ಡಿ. 19: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಡಿ.20ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ.

ಡಿ.20ರಂದು ಬೆಳಗ್ಗೆ 10 ಗಂಟೆಗೆ ನಗರದ ಅಮರಾವತಿ ಸರಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ವಿಜಯ ಪಥ ಪ್ರಾಜೆಕ್ಟ್‌ಗೆ ಅವರು ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 11:30ಕ್ಕೆ ವಿಜಯಶ್ರೀ ಹೆರಿಟೇಜ್‌ನಲ್ಲಿ ನಡೆಯಲಿರುವ ಚಿಂತನ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 7:30ಕ್ಕೆ ಹಂಪಿಯಲ್ಲಿ ಧ್ವನಿ ಮತ್ತು ಬೆಳಕು ಪ್ರದರ್ಶನ ವೀಕ್ಷಣೆ, ಬಳಿಕ ರಾತ್ರಿ ಹಂಪಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಡಿ.21ರಂದು ಬೆಳಗ್ಗೆ 10 ಗಂಟೆಗೆ ಕಮಲಾಪುರದ ಹವಾಮ ಕಚೇರಿ ಆವರಣದಲ್ಲಿ ಸಸಿ ನೆಡುವ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಬೆಳಗ್ಗೆ 10:30ಕ್ಕೆ ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News