Vijayanagara | ಹಿರಿಯ ರಂಗ ಕಲಾವಿದೆ ಟಿ.ಭಾರತಿ ಅವರಿಗೆ ಶಾಸಕರಿಂದ ಸನ್ಮಾನ

Update: 2026-08-22 17:36 IST

ವಿಜಯನಗರ/ಕೂಡ್ಲಿಗಿ: ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿರುವ ತಾಲೂಕಿನ ಹಿರಿಯ ರಂಗ ಕಲಾವಿದೆ ಟಿ. ಭಾರತಿ (73) ಅವರ ನಿವಾಸಕ್ಕೆ ಭೇಟಿ ನೀಡಿದ ಕೂಡ್ಲಿಗಿ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಬಡತನದ ನಡುವೆಯೂ ಕಳೆದ ಐದು ದಶಕಗಳಿಂದ ರಂಗಭೂಮಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ಟಿ. ಭಾರತಿ ಅವರ ಸಾಧನೆ ಅಪಾರವಾಗಿದೆ. ‘ಅಣ್ಣ-ತಂಗಿ’, ‘ಕುರುಕ್ಷೇತ್ರ’ ಸೇರಿದಂತೆ ವಿವಿಧ ನಾಟಕಗಳಲ್ಲಿ ಅಭಿನಯಿಸಿ 2,000ಕ್ಕೂ ಹೆಚ್ಚು ಪ್ರದರ್ಶನಗಳನ್ನು ನೀಡಿರುವ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ದೊರೆತಿರುವುದು ತಾಲೂಕಿಗೆ ಹೆಮ್ಮೆಯ ಸಂಗತಿ ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಟಿ. ಭಾರತಿ, ತಮ್ಮ ಕಲಾ ಸೇವೆಯನ್ನು ಗುರುತಿಸಿ ಗೌರವಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ತಳಶ್ ವೆಂಕಟೇಶ್, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಕಾವಲಿ ಶಿವಪ್ಪ ನಾಯಕ, ಮುಖಂಡರಾದ ವೆಂಕಟೇಶ್, ವಾಲ್ಮೀಕಿ ಸಂಘದ ಅಧ್ಯಕ್ಷ ಸುರೇಶ್, ದಿನಕರ್, ಯುವ ಮುಖಂಡರಾದ ಕಾಟೇರ್ ಲಂಕೇಶ್, ರಿಯಾಜ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News