×
Ad

Vijayanagara | ಮಹಡಿಯಿಂದ ಬಿದ್ದು ಮಹಿಳೆ ಮೃತ್ಯು; ಪ್ರಕರಣ ದಾಖಲು

Update: 2026-07-05 17:23 IST

ಹೊಸಪೇಟೆ/ವಿಜಯನಗರ: ನಗರದ ದೋಬಿಘಾಟ್ ಸಮೀಪದ ಪ್ರದೇಶದಲ್ಲಿ ಮಹಿಳೆಯೊಬ್ಬರು ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

ಮೃತ ಮಹಿಳೆ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಾನಸಿಕ ಆರೋಗ್ಯ ಸಮಸ್ಯೆಯೂ ಇದ್ದುದಾಗಿ ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಚಿತ್ತಾವಾಡಗಿ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮಹಿಳೆಯ ಸಾವಿನ ನಿಖರ ಕಾರಣ ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News