×
Ad

Vijayanagara | ಹಂಪಿ ಸಮೀಪ ಚಿರತೆ ದಾಳಿ: ಯುವಕನಿಗೆ ಗಾಯ

Update: 2026-05-30 21:15 IST

ಸಾಂದರ್ಭಿಕ ಚಿತ್ರ (PTI)

ಹೊಸಪೇಟೆ /ವಿಜಯನಗರ: ಹಂಪಿ ಸಮೀಪದ ಕಡ್ಡಿರಾಂಪುರ ಗ್ರಾಮದ ಬಳಿ ಚಿರತೆ ದಾಳಿ ನಡೆಸಿದ ಪರಿಣಾಮ ಯುವಕನೊಬ್ಬ ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶನಿವಾರ ನಡೆದಿದೆ.

ಹೊಸಪೇಟೆ ತಾಲೂಕಿನ ಕಡ್ಡಿರಾಂಪುರ ಗ್ರಾಮದ ನಿವಾಸಿ ರಾಜು ಎಂಬ ಯುವಕ ತುರ್ತಾ ಕಾಲುವೆ ಪ್ರದೇಶದ ಬಳಿ ತೆರಳಿದ್ದ ವೇಳೆ ಚಿರತೆ ದಾಳಿ ನಡೆಸಿದೆ. ದಾಳಿಯ ವೇಳೆ ರಾಜು ಅವರ ಕಾಲಿಗೆ ಗಾಯವಾಗಿದ್ದು, ಸ್ಥಳೀಯರ ಸಹಾಯದಿಂದ ಚಿರತೆಯ ದಾಳಿಯಿಂದ ಯುವಕ ಪಾರಾಗಿದ್ದಾನೆ.

ಗಾಯಗೊಂಡ ಯುವಕನನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಘಟನೆ ನಡೆದಿರುವ ಪ್ರದೇಶವು ಹಂಪಿ ಸಮೀಪದಲ್ಲಿದ್ದು, ಇತ್ತೀಚಿನ ದಿನಗಳಲ್ಲಿ ಕಾಡುಪ್ರಾಣಿಗಳ ಸಂಚಾರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಕಾಡುಪ್ರಾಣಿಗಳ ಹಾವಳಿಯನ್ನು ತಡೆಗಟ್ಟಲು ಹಾಗೂ ಗ್ರಾಮಸ್ಥರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಈ ಘಟನೆ ಹಂಪಿ ಪ್ರವಾಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News