×
Ad

ಹಗರಿಬೊಮ್ಮನಹಳ್ಳಿ, ಹೊಸಪೇಟೆ ಹಾಸ್ಟೆಲ್‌ಗಳಿಗೆ ಜಿಪಂ ಸಿಇಒ ಧೀಡಿರ್ ಭೇಟಿ

Update: 2025-12-17 21:57 IST

ವಿಜಯನಗರ: ಹೊಸಪೇಟೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಹಗರಿಬೊಮ್ಮನಹಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಬುಧವಾರ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮುಹಮ್ಮದ್ ಅಕ್ರಮ್ ಅಲಿ ಷಾ ಅವರು ಧೀಡಿರ್ ಭೇಟಿ ನೀಡಿ ಪರಿಶೀಲಿಸಿದರು.

ಹೊಸಪೇಟೆಯ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಪರಿಶೀಲನೆ ವೇಳೆ ದಾಖಲಾತಿ ನಿರ್ವಹಣೆಯಲ್ಲಿ ವೈಫಲ್ಯ ಕಂಡು ಹಾಸ್ಟೆಲ್ ವಾರ್ಡನ್‌ ಭೀಮದಾಸ್ ಅವರಿಗೆ ಎಚ್ಚರಿಕೆ ನೀಡಿದರು. ಹಾಸ್ಟೆಲ್‌ನಲ್ಲಿ ಅಹಾರ ಸುರಕ್ಷತೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಬೇಕು. ದಾಖಲಾತಿಗಳ ನಿರ್ವಹಣೆಯಲ್ಲಿ ನಿರ್ಲಕ್ಷ ವಹಿಸದಂತೆ ಸೂಚಿಸಿದರು.

ಈ ವೇಳೆ ಜಿಪಂ ಸಹಾಯಕ ಯೋಜನಾಧಿಕಾರಿ ಉಮೇಶ್, ವಸತಿ ಮೇಲ್ವಿಚಾರಕ ಭೀಮದಾಸ್, ಹಗರಿಬೊಮ್ಮನಹಳ್ಳಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ವಸತಿ ಮೇಲ್ವಿಚಾರಕಿ ಎ.ಗೀತಾ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News