×
Ad

ಸಿಜೆಐ ಮೇಲೆ ಶೂ ಎಸೆತ ಖಂಡಿಸಿ ಕರೆ ನೀಡಿದ್ದ ವಿಜಯಪುರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

Update: 2025-10-16 23:53 IST

ವಿಜಯಪುರ, ಅ.16 : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲೆ ಶೂ ಎಸೆದ ಪ್ರಕರಣದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ವಿವಿಧ ದಲಿತ, ಪ್ರಗತಿಪರ, ಅಲ್ಪಸಂಖ್ಯಾತ ಸಂಘಟನೆಗಳು ಗುರುವಾರ ಕರೆ ನೀಡಿದ್ದ ವಿಜಯಪುರ ಬಂದ್‌ಗೆ ಉತ್ತಮ ಪ್ರತಿಕ್ರಿಯೆಯಿಂದ ಯಶಸ್ವಿಯಾಗಿದೆ. ಎಂದು ತಿಳದುಬಂದಿದೆ.

ನಗರದ ಬಹುತೇಕ ಅಂಗಡಿ-ಮುಗಟ್ಟುಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಪೆಟ್ರೋಲ್, ಔಷಧಿ, ಆಸ್ಪತ್ರೆ, ಬ್ಯಾಂಕ್ ವ್ಯವಹಾರ ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಬಂದ್ ಆಗಿದ್ದವು.

ಪ್ರತಿಭಟನೆ ಕಾವು ಜೋರಾಗುವ ಹಿನ್ನೆಲೆಯಲ್ಲಿ ನಗರ ಸಾರಿಗೆ ಅಷ್ಟೇ ಅಲ್ಲದೇ ಗ್ರಾಮೀಣ ಭಾಗದ ಸಾರಿಗೆ ಸಂಚಾರ ಸಹ ಸಂಪೂರ್ಣ ಸ್ತಬ್ದವಾಗಿತ್ತು. ಸಾರಿಗೆ ಇಲಾಖೆಯ ಬಸ್‌ಗಳು ರಸ್ತೆಗೆ ಇಳಿಯಲೇ ಇಲ್ಲ. ಆಟೊ ಸಂಚಾರ ಬೆರಳಣಿಕೆಯಷ್ಟಿತ್ತು. ಜನಸಂದಣಿಯಿಂದ ಕೂಡಿರುತ್ತಿದ್ದ ಕೇಂದ್ರ ಬಸ್ ನಿಲ್ದಾಣ, ಕೆ.ಸಿ. ಮಾರುಕಟ್ಟೆ, ಗಾಂಧೀ ವೃತ್ತ ಹೀಗೆ ಅನೇಕ ಪ್ರದೇಶಗಳು ಜನರಿಲ್ಲದೇ ಬಿಕೋ ಎನ್ನುವಂತಾಯಿತು. ಬೆಳಿಗ್ಗೆಯಿಂದಲೇ ಪ್ರತಿಭಟನಾಕಾರರು ಹೋರಾಟ ಸ್ಥಳಗಳಿಗೆ ಹೋಗುತ್ತಿರುವ ದೃಶ್ಯ ಕಂಡು ಬಂದಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News