×
Ad

ಹೊಸಪೇಟೆ | ಪೊಲೀಸ್‌ ಇಲಾಖೆ ವತಿಯಿಂದ ಜಿಲ್ಲಾ ವಾರ್ಷಿಕ ಕ್ರೀಡಾಕೂಟ

Update: 2024-11-22 15:09 IST

ಹೊಸಪೇಟೆ : ಪೊಲೀಸ್‌ ಇಲಾಖೆ ವತಿಯಿಂದ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಲ್.ಶ್ರೀಹರಿಬಾಬು ಅವರ ನೇತೃತ್ವದಲ್ಲಿ ನಗರದ ಸಶಸ್ತ್ರ ಮೀಸಲು ಪಡೆ ಪರೇಡ್ ಮೈದಾನದಲ್ಲಿ 2024ನೇ ಜಿಲ್ಲಾ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಲಾಯಿತು.

ನಮ್ಮ ಪೊಲೀಸರು ದಿನನಿತ್ಯ ತಮ್ಮ ಕಾರ್ಯ ಚಟುವಟಿಕೆಯಲ್ಲಿ ತೊಡಗಿರುತ್ತಾರೆ. ವರ್ಷದಲ್ಲಿ ಒಂದು ಬಾರಿ ಈ ರೀತಿಯ ದೈಹಿಕ ಚಟುವಟಿಕೆಯನ್ನು ಮಾಡುವುದರಿಂದ ದೇಹಕ್ಕೂ ಮತ್ತು ಆರೋಗ್ಯಕ್ಕೆ ಒಳ್ಳೆಯದು ಎಂದು ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಲ್.ಶ್ರೀಹರಿಬಾಬು ಅವರು ಹೇಳಿದರು.

1‌00 ಮೀಟರ್ ರನ್ನಿಂಗ್, ಶಾಟ್ ಪುಟ್, ಇನ್ನು ಹಲವಾರು ಕ್ರೀಡೆಗಳಲ್ಲಿ ಪೊಲೀಸ್ ಕೀಡಾಪಟುಗಳು ಭಾಗವಹಿಸಿದರು. 

ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ವಿಜಯನಗರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಲೀಂ ಪಾಷಾ, ಹೊಸಪೇಟೆ ಡಿವೈಎಸ್‌ಪಿ ಮಂಜುನಾಥ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News