×
Ad

ವಿಜಯಪುರ | ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಮಂದಿ ನೀರುಪಾಲು

Update: 2024-07-02 20:26 IST

ವಿಜಯಪುರ: ತೆಪ್ಪ ಮಗುಚಿ 6 ಮಂದಿ ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.

ಕೃಷ್ಣ ನದಿ ದಡದಲ್ಲಿ ಗುಂಪೊಂದು ಇಸ್ಪೀಟ್ ಆಟವಾಡುತ್ತಿತ್ತು. ಸ್ಥಳಕ್ಕೆ ಪೊಲೀಸರು ಬರುತ್ತಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಯದಿಂದ ತಪ್ಪಿಸಿಕೊಳ್ಳಲು ತೆಪ್ಪದ ಮೂಲಕ ನದಿಯಲ್ಲಿ ಹೊರಟ್ಟಿದ್ದಾರೆ. ಆದರೆ, ಜೋರಾಗಿ ಬೀಸಿದ ಗಾಳಿಗೆ ತೆಪ್ಪ ನದಿಯಲ್ಲೇ ಮುಗುಚಿ ಬಿದ್ದಿದೆ. ಪರಿಣಾಮ ಇಬ್ಬರು ಈಜಿಕೊಂಡು ದಡ ಸೇರಿದ್ದರೆ, ಇನ್ನೂ ಆರು ಜನರು ನೀರುಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಕೊಲ್ಹಾರ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಮೃತದೇಹಗಳಿಗಾಗಿ ಹುಡುಕಾಟ ನಡೆಸಿದ್ದು, ಸದ್ಯದ ಮಾಹಿತಿ ಪ್ರಕಾರ ಓರ್ವನ ಮೃತದೇಹ ಹೊರ ತೆಗೆದಿದ್ದಾರೆ. ಇನ್ನುಳಿದವರ ಮೃದೇಹಗಳಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಎಸ್‌ಪಿ ಶಂಕರ ಮಾರಿಹಾರ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News