×
Ad

ವಿಜಯಪುರ | ಐದು ವರ್ಷದ ಬಾಲಕಿಯ ಮೇಲೆ ತಂದೆಯಿಂದಲೇ ಲೈಂಗಿಕ ದೌರ್ಜನ್ಯ : ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

Update: 2025-09-01 19:56 IST

ಸಾಂದರ್ಭಿಕ ಚಿತ್ರ | PC : freepik

ವಿಜಯಪುರ : ವಿಜಯಪುರ ನಗರದ 5 ವರ್ಷದ ಬಾಲಕಿ ಮೇಲೆ ಸ್ವಂತ ತಂದೆಯೇ ಲೈಂಗಿಕ ದೌರ್ಜನ್ಯವೆಸಗಿದ ಅಮಾನವೀಯ ಘಟನೆ ನಡೆದಿದ್ದು, ಈ ಕುರಿತಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಮತ್ತು ಆತನ ಪತ್ನಿ ಜಿಲ್ಲೆಯ ಹಳ್ಳಿಯೊಂದರಿಂದ ನಗರಕ್ಕೆ ಬಂದು ಮನೆಗೆಲಸ ಮಾಡಿಕೊಂಡಿದ್ದಾರೆ. ಆರೋಪಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ದಂಪತಿ ನಡುವೆ ಆಗಾಗ ವೈಮನಸ್ಸು ಉಂಟಾಗಿ ಆರೋಪಿಯು ತನ್ನ ಹಳ್ಳಿಗೆ ಹೋಗಿ ಬರುತ್ತಿದ್ದನು ಎಂದು ದೂರಿನಲ್ಲಿ ಪತ್ನಿ ತಿಳಿದ್ದಾರೆ.

ನಗರದಲ್ಲಿ ಆ.30ರಂದು ರಾತ್ರಿ 8 ಗಂಟೆಗೆ ಗಣಪತಿ ದರ್ಶನ ಮಾಡಿಸಿಕೊಂಡು ಬರುವುದಾಗಿ ಇಬ್ಬರು ಹೆಣ್ಣು ಮಕ್ಕಳನ್ನು ಮನೆಯಿಂದ ಕರೆದುಕೊಂಡು ಹೋಗಿದ್ದ ಪತಿಯು, ಚಿಕ್ಕ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಪತಿಯ ವಿರುದ್ಧ ಪತ್ನಿ ದೂರು ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಮಾಹಿತಿ ನೀಡಿದ್ದು, ಈಗಾಗಲೇ ಮಹಿಳಾ ಪೊಲೀಸ್ ಠಾಣೆಯ ಸಿಪಿಐ ಅವರಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ, ಮಗುವಿಗೆ ವೈದ್ಯಕೀಯ ಪರೀಕ್ಷೆ ಸೇರಿದಂತೆ ಎಲ್ಲಾ ಪ್ರತಿಕ್ರಿಯೆಗಳು ವಿಳಂಬ ಮಾಡದೇ, ತ್ವರಿತವಾಗಿ ಮಾಡುವಂತೆ ಸೂಚಿಸಲಾಗಿದೆ. ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News