×
Ad

Vijayapura | ನೌಕರಿ ಕೊಡಿಸುವುದಾಗಿ ವಂಚನೆ; 12 ವರ್ಷಗಳ ಬಳಿಕ ಆರೋಪಿಯ ಬಂಧನ

Update: 2026-07-08 00:04 IST

ವಿಜಯಪುರ : ತಾನು ಡಿಎಸ್ಪಿ ಎಂದು ಸುಳ್ಳು ಹೇಳಿ, ಖಾಕಿ ಯುನಿಫಾರ್ಮ್ ಧರಿಸಿ ನೌಕರಿ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ವರಗೋಡದಿನ್ನಿ ಗ್ರಾಮದ ಗ್ಯಾನಗೌಡ ಅಲಿಯಾಸ್ ಜ್ಞಾನಗೌಡ (31) ಬಂಧಿತ ಆರೋಪಿ.

ಈತ ಉದ್ಯೋಗದ ಆಸೆ ತೋರಿಸಿ ಹಣ ಪಡೆದು ವಂಚಿಸುವುದಲ್ಲದೆ, ಹಣ ಮರಳಿ ಕೇಳಿದವರನ್ನು ಅಪಹರಿಸಿ ಕೊಲೆ ಮಾಡಲು ಯತ್ನಿಸಿ 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಆರೋಪಿಯು ಬೆಂಗಳೂರಿನಲ್ಲಿ ತಂಗಿರುವ ಬಗ್ಗೆ ನಿಖರ ಮಾಹಿತಿ ಕಲೆಹಾಕಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಜು.6ರಂದು ಬೆಂಗಳೂರಿನಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News