ವಿಜಯಪುರ : ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದ ಶಿವಾನಂದ ನಗರದ ಅಂಗನವಾಡಿ ಕೇಂದ್ರದಲ್ಲಿ ಮೊಟ್ಟೆ ಸೇವಿಸಿದ 8 ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ.

ಅಂಗನವಾಡಿಯಲ್ಲಿ ನೀಡಿದ ಮೊಟ್ಟೆ ಸೇವಿಸಿದ ಬಳಿಕ ಮಕ್ಕಳಲ್ಲಿ ತೀವ್ರ ಹೊಟ್ಟೆನೋವು ಹಾಗೂ ವಾಂತಿ ಕಾಣಿಸಿಕೊಂಡಿದ್ದು, ಫುಡ್ ಪಾಯಿಸನ್  ಆಗಿರುವ ಶಂಕೆ ವ್ಯಕ್ತವಾಗಿದೆ. ಕೆಟ್ಟ ಅಥವಾ ಹಾಳಾದ ಮೊಟ್ಟೆಗಳನ್ನು ಸರಬರಾಜು ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದ್ದು, ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಘಟನೆ ನಡೆದ ತಕ್ಷಣ ಅಸ್ವಸ್ಥಗೊಂಡ ಎಂಟೂ ಮಕ್ಕಳನ್ನು ಬಸವನಬಾಗೇವಾಡಿ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆ ಮತ್ತು ಸೂಕ್ತ ಆರೈಕೆಗಾಗಿ ಮಕ್ಕಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor