ವಿಜಯಪುರ | ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ರೂ. ವಶ: ಇಬ್ಬರ ಬಂಧನ

Update: 2024-03-19 08:43 GMT

ವಿಜಯಪುರ, ಮಾ.19: ಹೈದರಾಬಾದ್ ಕಡೆಯಿಂದ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ರೂ. ನಗದು ಪತ್ತೆ ಹಚ್ಚಿರುವ ವಿಜಯಪುರ ಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಾಲಾಜಿ ನಿಕ್ಕಂ, ಸಚಿನ ಮೋಯಿತೆ ಬಂಧಿತ ಆರೋಪಿಗಳು. ಇವರಿಂದ 2 ಕೋಟಿ 93 ಲಕ್ಷದ 50 ಸಾವಿರ ರೂ. ನಗದು, ಒಂದು ಕಾರು, ಎರಡು ಮೊಬೈಲ್ ಫೋನ್ ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸೋಮವಾರ ರಾತ್ರಿ ಹೈದರಾಬಾದ್ ನಿಂದ ಹುಬ್ಬಳ್ಳಿಗೆ ಕೋಟ್ಯಂತರ ರೂ. ನಗದು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯನ್ನು ಆಧರಿಸಿ ಈ ಕಾರ್ಯಾಚರಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಂದಗಿ ಬೈಪಾಸ್ ರಸ್ತೆ ಬಳಿ ಸೋಮವಾರ ರಾತ್ರಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ವೇಳೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.93 ಕೋಟಿ ರೂ. ಪತ್ತೆಯಾಗಿದೆ.

. ಈ ಕುರಿತು ಗೋಳಗುಮ್ಮಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News