ವಿಜಯಪುರ: ಚಾಲಕನ‌ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಸ್ಪಿರಿಟ್ ಟ್ಯಾಂಕರ್ ಗೆ ಬೆಂಕಿ

Update: 2024-03-25 07:04 GMT

ವಿಜಯಪುರ: ಸ್ಪಿರಿಟ್ ತುಂಬಿದ ಟ್ಯಾಂಕರ್ ಚಾಲಕನ‌ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದು ಬೆಂಕಿಯಿಂದ ಹೊತ್ತಿ ಉರಿದ ಘಟನೆ ಸಿಂದಗಿ ಪಟ್ಟಣದ ಹೊರಭಾಗದ ಕಲಬುರಗಿ ಬೈ ಪಾಸ್ ಬಳಿ ಸೋಮವಾರ ನಡೆದಿದೆ.

ರಸ್ತೆ ಪಕ್ಕಕ್ಕೆ ಬೀಳುತ್ತಲೇ ಟ್ಯಾಂಕರ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಿಂದಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೆಂಕಿಯನ್ನು ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿಯ ಹರಸಾಹಸ ಪಡುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News