×
Ad

ವಿಜಯಪುರ | ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಹಿಳೆಯರನ್ನು ನೆಲದ ಮೇಲೆ ಮಲಗಿಸಿದ ಆರೋಪ : ಆಸ್ಪತ್ರೆ ಸಿಬ್ಬಂದಿಗಳ ವಿರುದ್ಧ ಆಕ್ರೋಶ

Update: 2024-02-28 19:45 IST

ವಿಜಯಪುರ: ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಹಿಳೆಯರನ್ನು ಆಸ್ಪತ್ರೆಯ ಸಿಬ್ಬಂದಿಗಳು ನೆಲದ ಮೇಲೆಯೇ ಮಲಗಿಸಿದ್ದಾರೆ ಎನ್ನಲಾದ ಘಟನೆಯು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ವರದಿಯಾಗಿದೆ.

ಮಹಿಳೆಯರಿಗೆ ಸಂತಾನಹರಣ ಕ್ಯಾಂಪ್ ಹಿನ್ನಲೆಯಲ್ಲಿ ಅನೇಕ ಮಹಿಳೆಯರು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದು, ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಮಹಿಳೆಯರನ್ನು ಸಿಬ್ಬಂದಿಗಳು ನೆಲದ ಮೇಲೆಯೇ ಮಲಗಿಸಿದ್ದಾರೆ. ಮತ್ತೊಂದೆಡೆ ಒಂದೇ ಬೆಡ್ ನಲ್ಲಿ 5ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯರನ್ನು ಮಲಗಿಸಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.

ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News