×
Ad

ವಿಜಯಪುರ | ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ : ಯತ್ನಾಳ್ ವಿರುದ್ಧ ಮತ್ತೊಂದು ಎಫ್‌ಐಆರ್‌

Update: 2025-08-13 20:39 IST

ಬಸನಗೌಡ ಪಾಟೀಲ್ ಯತ್ನಾಳ್‌

ವಿಜಯಪುರ : ʼಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.ಗಳ ನಗದು ಘೋಷಣೆʼ ಮಾಡಿದ್ದ ಆರೋಪ ಸಂಬಂಧ ವಿಜಯಪುರದ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಗರದ ಗಾಂಧಿಚೌಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಮಹಾನಗರ ಪಾಲಿಕೆ ಮಾಜಿ ಸದಸ್ಯ ಮೈನುದ್ದೀನ ಬೀಳಗಿ ಅವರು ನೀಡಿದ ದೂರಿನ ಮೇರೆಗೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ದೂರಿನನ್ವಯ ಗಾಂಧಿಚೌಕ ಪೊಲೀಸ್ ಠಾಣೆಯಲ್ಲಿ ಬಿ.ಎನ್.ಎಸ್ 2023(ಯು/ಎಸ್ 193, 299, 353(1)(c) ಮತ್ತು 353(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ಆ.11ರಂದು ಕೊಪ್ಪಳದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, 'ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.ಗಳ ನಗದು ನೀಡಲಾಗುವುದು ಎಂದು ಸಾರ್ವಜನಿಕವಾಗಿ ಘೋಷಣೆ ಮಾಡಿದ್ದರು. ಒಂದು ಸಮುದಾಯವನ್ನು ಗುರಿಯಾಗಿಸಿ ಪ್ರಚೋದಿಸುವ ಕೆಲಸ ಮಾಡಿದ್ದಾರೆ. ಆದ್ದರಿಂದ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಯತ್ನಾಳ್‌ ವಿರುದ್ಧ ರೋಝಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ :

ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದಡಿ ವಿಜಯಪುರದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರೋಝಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಖಿದ್ಮತ್ ಎ ಮಿಲ್ಲತ್ ಕಮಿಟಿಯ ಅಧ್ಯಕ್ಷರಾದ ಖಮರ್ ಜುನೈದ್ ಖುರೇಷಿ ಎಂಬವರು ನೀಡಿದ ದೂರಿನ ಮೇರೆಗೆ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News