×
Ad

ವಿಜಯಪುರ: ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ; ಆಸ್ಪತ್ರೆಗೆ ದಾಖಲು

Update: 2025-01-20 12:46 IST

ವಿಜಯಪುರ, ಜ. 20: ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ವಿಜಯಪುರ ಹೂರವಲಯದ ಗಾಂಧಿನಗರದ ಸ್ಟಾರ್ ಚೌಕ್ ಬಳಿ ಇರುವ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ.

ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ್ ಎಂಬಾತ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ್ ಎಂಬ ಮೂವರು ಹಲ್ಲೆಗೊಳಗಾದ ಕಾರ್ಮಿಕರು.  ಮುಂಗಡವಾಗಿ ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಖೇಮು ರಾಠೋಡ್ ಹಾಗೂ ಇತರರು ಪೈಪ್‌ಗಳಿಂದ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದವರಾದ ಮೂವರು ಕಾರ್ಮಿಕರು, ಹಬ್ಬಕ್ಕೆಂದು ಊರಿಗೆ ಹೋಗಿದ್ದರು. ಊರಿಗೆ ಹೋಗಿ ವಾಪಸ್ ಬರಲು ವಿಳಂಬ ಮಾಡಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ಹಲ್ಲೆಗೊಳಗಾದ ಕಾರ್ಮಿಕರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News