×
Ad

ವಿಜಯಪುರ | ಕೃಷ್ಣ ಪ್ಯಾಲೆಸ್ ನಲ್ಲಿ ಬೆಂಕಿ ಅವಘಡ : ಅಪಾರ ಹಾನಿ

Update: 2025-12-29 11:35 IST

ವಿಜಯಪುರ: ನಗರದ ಸೋಲಾಪುರ ರಸ್ತೆಯಲ್ಲಿರುವ ಉಡುಪಿ ಕೃಷ್ಣ ಪ್ಯಾಲೆಸ್‌ನಲ್ಲಿ ಭಾನುವಾರ ತಡರಾತ್ರಿ ಭಾರೀ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾಗಿರುವ ಘಟನೆ ನಡೆದಿದೆ.

ಮೂರು ಅಂತಸ್ತಿನ ಹೊಟೆಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದರು. ಸುಮಾರು ಮೂರರಿಂದ ನಾಲ್ಕು ಗಂಟೆಗಳ ಕಾಲ ಶ್ರಮಪಟ್ಟು ಬೆಂಕಿಯನ್ನು ಸಂಪೂರ್ಣವಾಗಿ ಆರಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಗ್ಯಾಸ್ ಲೀಕ್ ಅಥವಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರಬಹುದೆಂದು ಶಂಕಿಸಲಾಗಿದೆ.

ಈ ಕುರಿತು ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News