ವಿಜಯಪುರ | ಲಾರಿ-ಬಸ್ ಢಿಕ್ಕಿ : ಹಲವರಿಗೆ ಗಾಯ
Update: 2025-10-04 13:57 IST
ವಿಜಯಪುರ: ಮೆಕ್ಕೆಜೋಳ ತುಂಬಿಕೊಂಡು ಸಾಗುತ್ತಿದ್ದ ಲಾರಿ ಮತ್ತು ಸಾರಿಗೆ ಬಸ್ ನಡುವೆ ಢಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ದೇವರಹಿಪ್ಪರಗಿ ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಅಪಘಾತದಲ್ಲಿ ಕೆಲ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಇನ್ನು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಸ್ಥಳೀಯರು ವಿಜಯಪುರ, ಸಿಂದಗಿ ಹಾಗೂ ದೇವರಹಿಪ್ಪರಗಿ ಸರಕಾರಿ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಶಾಸಕ ಅಶೋಕ ಮನಗೂಳಿ ಹಾಗೂ ದೇವರಹಿಪ್ಪರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ದೇವರಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.