Vijayapura | ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ವಿಜಯಪುರ : ಜಿಲ್ಲೆಯ ಹುಬ್ಬಳ್ಳಿ ರಸ್ತೆಯ ಹೊನಗನಹಳ್ಳಿ ಗ್ರಾಮದ ಬಳಿಯ ಜಮೀನೊಂದರಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಯ ಹೆಸರು ಹಾಗೂ ಗುರುತು ಪತ್ತೆಯಾಗಿಲ್ಲ. ವ್ಯಕ್ತಿಯ ಮೈಮೇಲೆ ಗಾಯದ ಗುರುತುಗಳಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ಜಮೀನಿನಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.
ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಮೃತದೇಹ ಕಂಡು ಆತಂಕಗೊಂಡಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.