Vijayapura | ಬಸವನಬಾಗೇವಾಡಿಯಲ್ಲಿ ಮತ್ತೆ ಭೂಕಂಪನ: ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲು
ಸಾಂದರ್ಭಿಕ ಚಿತ್ರ (PTI)
ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ಬುಧವಾರ ನಸುಕಿನ 2:04ರ ಸುಮಾರಿಗೆ ಭೂಕಂಪನ ಸಂಭವಿಸಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (KSNDMC) ಮಾಹಿತಿಯಂತೆ, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ. ಪಟ್ಟಣದ ಈಶಾನ್ಯ ದಿಕ್ಕಿನಲ್ಲಿ ಸುಮಾರು 3.9 ಕಿ.ಮೀ ದೂರದ ಕೇಂದ್ರಬಿಂದುವಿನಲ್ಲಿ, ಭೂಮಿಯ 10 ಕಿ.ಮೀ ಆಳದಲ್ಲಿ ಈ ಭೂಕಂಪನ ಸಂಭವಿಸಿದೆ.
ಇದಕ್ಕೂ ಮೊದಲು ಸೋಮವಾರ ಮಧ್ಯರಾತ್ರಿ 12:26ರ ಸುಮಾರಿಗೆ ತಾಲೂಕಿನ ದಿಂಡಿವಾರ ಗ್ರಾಮ ಪಂಚಾಯಿತಿ ಕಚೇರಿಯಿಂದ ಸುಮಾರು 1.1 ಕಿ.ಮೀ ನೈಋತ್ಯ ದಿಕ್ಕಿನಲ್ಲಿ, 10 ಕಿ.ಮೀ ಆಳದಲ್ಲಿ ಲಘು ಭೂಕಂಪನ ಸಂಭವಿಸಿತ್ತು. ಆ ಭೂಕಂಪನವೂ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯನ್ನೇ ದಾಖಲಿಸಿತ್ತು.