×
Ad

ಪ್ರಚೋದನಕಾರಿ ಭಾಷಣ ಆರೋಪ: ಬಿಜೆಪಿ ಶಾಸಕರಾದ ಯತ್ನಾಳ್, ರಾಜಾ ಸಿಂಗ್ ವಿರುದ್ಧ ಪ್ರಕರಣ ದಾಖಲು

Update: 2024-03-06 13:08 IST

ವಿಜಯಪುರ: ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹಾಗೂ ತೆಲಂಗಾಣ ರಾಜ್ಯದ ಗೋಶಾಮಹಲ ಬಿಜೆಪಿ ಶಾಸಕ ಟಿ. ರಾಜಾಸಿಂಗ್ ವಿರುದ್ಧ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

ಮಾರ್ಚ್ 4ರಂದು ವಿಜಯಪುರ ನಗರದ ಶಿವಾಜಿ ಸರ್ಕಲ್‌‌ನಲ್ಲಿ ನಡೆದಿದ್ದ ಛತ್ರಪತಿ ಶಿವಾಜಿ ಜಯಂತಿ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲಂ: 153, 506, 504, 505(2) ಐಪಿಸಿ ಅಡಿಯಲ್ಲಿ ಗಾಂಧಿಚೌಕ್ ಪೊಲೀಸ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News