×
Ad

Vijayapura | ಗಾಳಿ-ಮಳೆಗೆ ಮನೆಯ ಮೇಲ್ಛಾವಣಿ ಕುಸಿತ; ಒಂದೇ ಕುಟುಂಬದ ನಾಲ್ವರು ಮೃತ್ಯು

Update: 2026-05-15 13:51 IST

ವಿಜಯಪುರ : ಆಲಮೇಲ ತಾಲೂಕಿನ ಮೋರಟಗಿ ಗ್ರಾಮದಲ್ಲಿ ಗುರುವಾರ ರಾತ್ರಿ ಗಾಳಿ ಮಳೆಗೆ ಮನೆಯೊಂದರ ಮೇಲ್ಛಾವಣಿ ಕುಸಿದು ಪತಿ-ಪತ್ನಿ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ  ನಡೆದಿದೆ.

ಮೃತರನ್ನು ಗುರುನಾಥ ಬಡಿಗೇರ (35), ಪತ್ನಿ ಜ್ಯೋತಿ ಗುರುನಾಥ ಬಡಿಗೇರ (28), ಮಗಳು ಕಾಳಮ್ಮ ಬಡಿಗೇರ (13), ಕೀರ್ತಿ ಬಡಿಗೇರ (09) ಎಂದು ಗುರುತಿಸಲಾಗಿದೆ.

ತಮ್ಮ ಸ್ವಂತ ಮನೆಯ ದುರಸ್ಥಿ ಮಾಡುವ ಕಾರಣ ಹಳೆಯ ಮನೆಯಲ್ಲಿ ಬಾಡಿಗೆಯಾಗಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಲ್ವರ ಮೃತದೇಹವನ್ನು ಹೊರ ತೆಗೆಯಲು ಅಗ್ನಿ ಶಾಮಕ ದಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News