ಸಾಂದರ್ಭಿಕ ಚಿತ್ರ

ಯಾವುದೇ ಪರೀಕ್ಷಾ ಶುಲ್ಕವಿಲ್ಲದೆ ನೇರ ಆಯ್ಕೆಯ ಮೂಲಕ ಹುದ್ದೆ ಪಡೆಯಲು ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ದೊರೆತಿದೆ.

ಕೊಪ್ಪಳ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಒಟ್ಟು 215 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪರೀಕ್ಷಾ ಶುಲ್ಕವಿಲ್ಲದೆ ನೇರ ಆಯ್ಕೆಯ ಮೂಲಕ ಹುದ್ದೆ ಪಡೆದುಕೊಳ್ಳಲು ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ದೊರೆತಿದೆ.

📌ಹುದ್ದೆಯ ವಿವರಗಳು:

ಸಂಸ್ಥೆಯ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ

ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ (28 ಹುದ್ದೆಗಳು) ಮತ್ತು ಸಹಾಯಕಿ (187 ಹುದ್ದೆಗಳು)

ಹುದ್ದೆಗಳ ಸಂಖ್ಯೆ: 215

ಉದ್ಯೋಗ ಸ್ಥಳ: ಯಲಬುರ್ಗಾ, ಗಂಗಾವತಿ, ಕನಕಗಿರಿ, ಕೊಪ್ಪಳ, ಕುಷ್ಟಗಿ

📌ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ :

ವಿದ್ಯಾಭ್ಯಾಸ: ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಅಥವಾ 12ನೇ/ಪಿಯುಸಿ (PUC) ಪೂರ್ಣಗೊಳಿಸಿದ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಂಗನವಾಡಿ ಸಹಾಯಕಿ ಹುದ್ದೆಗೆ 8ನೇ ತರಗತಿ ಪಾಸ್ ಆದರೆ ಸಾಕಾಗುತ್ತದೆ.

ಹೆಚ್ಚುವರಿ ತರಬೇತಿ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಪಿಯುಸಿ, ಎನ್‌ಟಿಟಿ, ಇಸಿಸಿಇ, ಅಥವಾ ಡಿಎಸ್‌ಇಇಆರ್‌ಟಿ ಪ್ರಮಾಣೀಕರಣ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ.

ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಬಾರದು.

ವಯೋಮಿತಿ ಸಡಿಲಿಕೆ: ವಿಕಲಚೇತನ (PWD) ಅಭ್ಯರ್ಥಿಗಳಿಗೆ ನಿಯಮಾನುಸಾರ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

📌ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಶುಲ್ಕ :

ಅರ್ಜಿ ಶುಲ್ಕ: ಈ ನೇಮಕಾತಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ: ಅಭ್ಯರ್ಥಿಗಳ ಮೆರಿಟ್‌ ಪಟ್ಟಿ ಆಧಾರದ ಮೇಲೆ ನೇರ ಆಯ್ಕೆ ಮಾಡಲಾಗುತ್ತದೆ.

ವೇತನ: ಸರ್ಕಾರದ ನಿಯಮಾನುಸಾರ ಮಾಸಿಕ ಗೌರವಧನ ಸಿಗಲಿದೆ.

📌ಅರ್ಜಿ ಸಲ್ಲಿಸುವ ಸರಳ ಹಂತಗಳು :

► ಕೊಪ್ಪಳ ಜಿಲ್ಲೆಯ ಅಧಿಕೃತ ವೆಬ್‌ಸೈಟ್ koppal.nic.in ಗೆ ಭೇಟಿ ನೀಡಿ.

► ನೇಮಕಾತಿ (Recruitment) ವಿಭಾಗದಲ್ಲಿ ಲಭ್ಯವಿರುವ ‘ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಅಧಿಸೂಚನೆ 2026’ ಲಿಂಕ್ ತೆರೆಯಿರಿ.

► ಅಧಿಸೂಚನೆಯಲ್ಲಿ ನೀಡಲಾದ ಅರ್ಹತಾ ಷರತ್ತುಗಳನ್ನು ಸರಿಯಾಗಿ ಓದಿಕೊಳ್ಳಿ.

► ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯ ವಿವರಗಳನ್ನು ಭರ್ತಿ ಮಾಡಿ.

► ಅರ್ಜಿ ಸಲ್ಲಿಸಿದ ನಂತರ ಸ್ವೀಕೃತಿ ಸಂಖ್ಯೆಯನ್ನು (Acknowledgement Slip) ಮುಂದಿನ ಉಲ್ಲೇಖಕ್ಕಾಗಿ ಪ್ರಿಂಟ್ ತೆಗೆದಿಟ್ಟುಕೊಳ್ಳಿ

📞 ಸಂಪರ್ಕ ಮಾಹಿತಿ :

ಅಧಿಸೂಚನೆಯಲ್ಲಿ ಒದಗಿಸಲಾದ ಸಹಾಯವಾಣಿ ಸಂಖ್ಯೆಗಳು: 8088402582, 7259351515, 7204861203

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor