ಮತ್ತೆ ಭಾರೀ ಏರಿಕೆ ದಾಖಲಿಸಿದ ಚಿನ್ನದ ಬೆಲೆ; ಮಂಗಳೂರಿನಲ್ಲಿ ಇಂದಿನ ದರವೆಷ್ಟು?

Update: 2026-08-22 11:56 IST

ಸಾಂದರ್ಭಿಕ ಚಿತ್ರ | Photo Credit : magnific.com

ಈ ವಾರ ಚಿನ್ನದ ದರದಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, ಮೇ ಮಾಸದ ಗರಿಷ್ಠ ಚಿನ್ನದ ದರದ ಸಮೀಪಕ್ಕೆ ಬಂದಿದೆ.

ಸತತ ಎರಡನೇ ವಾರವೂ ಚಿನ್ನದ ಬೆಲೆ ಏರಿಕೆಯ ಹಾದಿಯಲ್ಲಿದೆ. ಜೂನ್ ಮಾಸದ ಬೆಲೆಯ ಸಮೀಪಕ್ಕೆ ಬಂದಿದೆ. ಈ ವಾರ ಬುಧವಾರ ಸ್ವಲ್ಪ ಕುಸಿದಿದೆ. ಆದರೆ ಗುರುವಾರ ಮತ್ತು ಶುಕ್ರವಾರ ಮತ್ತೆ ಬೆಲೆಯಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಹಿಂದಿನ ವಾರದ ಏರಿಕೆಯನ್ನು ಮೀರಿ ಈ ವಾರ ಚಿನ್ನದ ದರದಲ್ಲಿ ಏರಿಕೆ ಕಂಡಿದ್ದು, ಮೇ ಮಾಸದ ಗರಿಷ್ಠ ಚಿನ್ನದ ದರದ ಸಮೀಪಕ್ಕೆ ಬರುತ್ತಿದೆ.

ಚಿನ್ನದ ದರದಲ್ಲಿ ಭಾರೀ ಏರಿಕೆ

ಆಗಸ್ಟ್ 22ರಂದು ಶನಿವಾರ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಶುಕ್ರವಾರದ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 152 ರೂ. ಏರಿಕೆಯಾಗಿ, 10 ಗ್ರಾಂ ಬೆಲೆ 1,63,090 ರೂ.ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 140 ರೂ. ಏರಿದ್ದು, 10 ಗ್ರಾಂಗೆ 1,49,500 ರೂ.ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 114 ರೂ. ಹೆಚ್ಚಾಗಿ, 10 ಗ್ರಾಂಗೆ 1,22,320 ರೂ.ಗೆ ತಲುಪಿದೆ.

ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?

ಆಗಸ್ಟ್ 22ರಂದು ಶನಿವಾರ ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ದಾಖಲಾಗಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 16,309 (+152) ರೂ.ಗೆ ತಲುಪಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,950 (+140) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 12,232 (+114) ರೂ.ಗೆ ಬಂದು ನಿಂತಿದೆ.

ಏರಿದ ಬೆಳ್ಳಿಯ ದರ

ಮಂಗಳೂರಿನಲ್ಲಿ ಬೆಳ್ಳಿಯ ಬೆಲೆ ಮೇ 13ರಂದು ಪ್ರತಿ ಕೆಜಿಗೆ 3,30,000 ರೂ.ಗೆ ಏರಿದ ನಂತರ, ಬಹುತೇಕ ಮೇ ತಿಂಗಳಿಡೀ ಪ್ರತಿ ಕೆಜಿಗೆ 2,80,000 ರೂ.ಗೆ ಬಂದು ಸ್ಥಿರವಾಗಿತ್ತು. ಆದರೆ ಜೂನ್‌ನಲ್ಲಿ ಸ್ವಲ್ಪ ಏರಿಳಿತ ಕಂಡುಬಂದು, ಪ್ರತಿ ಕೆಜಿಗೆ 2,40,000 ರೂ.ಗೆ ಬಂದು ನಿಂತಿತ್ತು. ಜುಲೈ ಆರಂಭದಲ್ಲಿ ಪ್ರತಿ ಕೆಜಿಗೆ 2,50,000 ರೂ.ವರೆಗೂ ಬೆಲೆ ಏರಿದ ನಂತರ ಇಳಿದಿತ್ತು.

ಜುಲೈ 11ರಿಂದ ಬೆಳ್ಳಿಯ ದರ ಬಹುತೇಕ ಪ್ರತಿ ಕೆಜಿಗೆ 2,35,000 ರೂ.ಗೆ ಸ್ಥಿರವಾಗಿತ್ತು. ಆದರೆ ಕಳೆದೆರಡು ವಾರಗಳಲ್ಲಿ ಮತ್ತೆ ಏರಿಕೆಯಾಗಿ, ಪ್ರತಿ ಕೆಜಿಗೆ 2,50,000 ರೂ.ಗೆ ಬೆಲೆ ಸ್ಥಿರವಾಗಿತ್ತು. ಇದೀಗ ಪ್ರತಿ ಕೆಜಿಗೆ 2,60,000 ರೂ.ಗೆ ತಲುಪಿದೆ.

ವಿವಿಧ ನಗರಗಳಲ್ಲಿ 1 ಗ್ರಾಂ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?

ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 16,324 (+152) ರೂ., 22 ಕ್ಯಾರೆಟ್ ಚಿನ್ನದ ದರ 14,965 (+140) ರೂ.

ಮುಂಬೈ: 24 ಕ್ಯಾರೆಟ್ ಚಿನ್ನದ ದರ 16,309 (+152) ರೂ., 22 ಕ್ಯಾರೆಟ್ ಚಿನ್ನದ ದರ 14,950 (+140) ರೂ.

ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 16,314 (+152) ರೂ., 22 ಕ್ಯಾರೆಟ್ ಚಿನ್ನದ ದರ 14,955 (+140) ರೂ.

ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 16,309 (+109) ರೂ., 22 ಕ್ಯಾರೆಟ್ ಚಿನ್ನದ ದರ 14,950 (+100) ರೂ.

ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 16,309 (+152) ರೂ., 22 ಕ್ಯಾರೆಟ್ ಚಿನ್ನದ ದರ 14,950 (+140) ರೂ.

ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 16,309 (+152) ರೂ., 22 ಕ್ಯಾರೆಟ್ ಚಿನ್ನದ ದರ 14,950 (+140) ರೂ.

ಜೈಪುರ: 24 ಕ್ಯಾರೆಟ್ ಚಿನ್ನದ ದರ 16,324 (+152) ರೂ., 22 ಕ್ಯಾರೆಟ್ ಚಿನ್ನದ ದರ 14,965 (+140) ರೂ.

ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 16,324 (+152) ರೂ., 22 ಕ್ಯಾರೆಟ್ ಚಿನ್ನದ ದರ 14,965 (+140) ರೂ.

ಲಖನೌ: 24 ಕ್ಯಾರೆಟ್ ಚಿನ್ನದ ದರ 16,324 (+152) ರೂ., 22 ಕ್ಯಾರೆಟ್ ಚಿನ್ನದ ದರ 14,965 (+140) ರೂ.

ಕೊಚ್ಚಿ: 24 ಕ್ಯಾರೆಟ್ ಚಿನ್ನದ ದರ 16,309 (+152) ರೂ., 22 ಕ್ಯಾರೆಟ್ ಚಿನ್ನದ ದರ 14,950 (+140) ರೂ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News