ಸಾಂದರ್ಭಿಕ ಚಿತ್ರ | Photo Credit : magnific.com

ಆಸ್ಪತ್ರೆಗಳಲ್ಲಿ 24/7 ವಿಶೇಷ ಸೇವೆಗಳನ್ನು ಒದಗಿಸುವ ಬಗ್ಗೆ ಸರ್ಕಾರದ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ಎಲ್ಲಾ ಸಾಮಾನ್ಯ ಆಸ್ಪತ್ರೆಗಳಲ್ಲಿ 24 ಗಂಟೆಗಳ ಸೇವೆಯನ್ನು ಖಚಿತಪಡಿಸಲಾಗಿದೆ ಎಂದು ಕೇರಳಂ ಆರೋಗ್ಯ ಸಚಿವ ಕೆ. ಮುರಳೀಧರನ್ ಹೇಳಿದ್ದಾರೆ.

ರಾಜ್ಯದ ಆರೋಗ್ಯ ಮೂಲಸೌಕರ್ಯವನ್ನು ಸುಧಾರಿಸುವ ಪ್ರಯತ್ನವಾಗಿ ಕೇರಳಂ ಸರ್ಕಾರ ಆರು ತಿಂಗಳೊಳಗೆ ಹೆಚ್ಚಿನ ವೈದ್ಯರನ್ನು ನೇಮಿಸಿಕೊಳ್ಳಲಿದೆ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ 24 ಗಂಟೆಗಳ ತಜ್ಞ ಸೇವೆಗಳನ್ನು ಪರಿಚಯಿಸಲಿದೆ ಎಂದು ಕೇರಳ ಆರೋಗ್ಯ ಸಚಿವ ಕೆ. ಮುರಳೀಧರನ್ ಹೇಳಿದ್ದಾರೆ.

ಸರ್ಕಾರಿ ಆಸ್ಪತ್ರೆಗಳನ್ನು ಉನ್ನತ ಗುಣಮಟ್ಟಕ್ಕೆ ತರುವ ಗುರಿಯನ್ನು ಸರ್ಕಾರ ಹೊಂದಿದೆ. ರೋಗಿಗಳು ಗರಿಷ್ಠ ಪ್ರಮಾಣದಲ್ಲಿ ಚಿಕಿತ್ಸೆ ಪಡೆಯುವಂತೆ ಸರ್ಕಾರಿ ಆಸ್ಪತ್ರೆಗಳನ್ನು ಸಜ್ಜುಗೊಳಿಸಲು ಕೆಲಸ ಮಾಡುತ್ತಿದ್ದು, ಆ ನಿಟ್ಟಿನಲ್ಲಿ ಪ್ರಯತ್ನಗಳು ಪ್ರಸ್ತುತ ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.

ಆಸ್ಪತ್ರೆಗಳಲ್ಲಿ 24/7 ವಿಶೇಷ ಸೇವೆಗಳನ್ನು ಒದಗಿಸುವ ಬಗ್ಗೆ ಸರ್ಕಾರದ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ಎಲ್ಲಾ ಸಾಮಾನ್ಯ ಆಸ್ಪತ್ರೆಗಳಲ್ಲಿ 24 ಗಂಟೆಗಳ ಸೇವೆಯನ್ನು ಖಚಿತಪಡಿಸಲಾಗಿದೆ. ಆ ವಿಚಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ಸರ್ಕಾರ ಘೋಷಿಸಿದ ಸೇವೆ ಇದಾಗಿರುವುದರಿಂದ ರಾತ್ರಿ ಪಾಳಿಯಲ್ಲೂ ವೈದ್ಯರು ಕೆಲಸ ಮಾಡುವುದು ಖಚಿತವಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ನೇಮಕಾತಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ವೈದ್ಯರು ಶೀಘ್ರವೇ ಸೇವೆಗೆ ಸೇರಿಕೊಳ್ಳಲಿದ್ದಾರೆ. ಈಗಾಗಲೇ PSC ರ‍್ಯಾಂಕ್ ಪಟ್ಟಿಯಿಂದ ಸುಮಾರು 400 ವೈದ್ಯರನ್ನು ಸಲಹಾ ಮೆಮೊಗಳಿಗಾಗಿ (ಸರ್ಕಾರಿ ನೇಮಕಾತಿಯ ಸಲಹಾ ಪತ್ರ) ಕರೆಯಲಾಗಿತ್ತು. ಅವರಲ್ಲಿ 134 ವೈದ್ಯರು ಹಾಜರಾಗಿದ್ದರು ಮತ್ತು ಎಲ್ಲರಿಗೂ ಮೆಮೊ ನೀಡಲಾಗಿದೆ.

ಇದಕ್ಕೂ ಮುನ್ನ ಕೇರಳ ಸರ್ಕಾರಿ ವೈದ್ಯಕೀಯ ಅಧಿಕಾರಿಗಳ ಸಂಘ (KGMOA) 24 ಗಂಟೆಗಳ ತಜ್ಞ ಸೇವೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಮುರಳೀಧರನ್, “ಸಮಸ್ಯೆಗಳಿದ್ದಲ್ಲಿ ವೈದ್ಯರು ನೇರವಾಗಿ ತಮ್ಮನ್ನು ಸಂಪರ್ಕಿಸಬಹುದು” ಎಂದು ಹೇಳಿದ್ದಾರೆ.

“ವೈದ್ಯರು ಅನೇಕ ಕಳವಳ ವ್ಯಕ್ತಪಡಿಸಿದ್ದಾರೆ. ಕೆಲವೊಂದು ಸಮಸ್ಯೆಗಳ ಬಗ್ಗೆ ನನಗೆ ವಿವರ ನೀಡಿದ್ದಾರೆ. ಯಾರೇ ಬೇಕಾದರೂ ಆರೋಗ್ಯ ಸಚಿವರನ್ನು ನೇರವಾಗಿ ಸಂಪರ್ಕಿಸಬಹುದು ಎಂದು ನಾನು ಅವರಿಗೆ ತಿಳಿಸಿದ್ದೇನೆ. ಮಾಧ್ಯಮಗಳಿಗೆ ಹೇಳಿಕೆ ನೀಡುವ ಬದಲಾಗಿ ನೇರವಾಗಿ ಸಚಿವರನ್ನು ಭೇಟಿ ಮಾಡಬಹುದು” ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor