KSRLPSನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ (KSRLPS) ಅಧಿಕೃತ ಅಧಿಸೂಚನೆಯ ಮೂಲಕ ನ್ಯಾಷನಲ್ ರೂರಲ್ ಲೈವ್ಲಿಹುಡ್ ಮಿಷನ್‌ಗೆ ಕ್ಲಸ್ಟರ್ ಸೂಪರ್‌ವೈಸರ್ ಮತ್ತು ಬ್ಲಾಕ್ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರಕಾರದಡಿಯಲ್ಲಿ ಕೋಲಾರ ಜಿಲ್ಲೆಯ ಕೋಲಾರ, ಮಾಲೂರು, ಮುಳಬಾಗಿಲು, ಬಂಗಾರಪೇಟೆ, ಶ್ರೀನಿವಾಸಪುರ ಮತ್ತಿತರ ಕಡೆಗೆ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 30ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಹೆಚ್ಚಿನ ವಿವರಗಳಿಗೆ ಈ ಕೆಳಗಿನ ಲಿಂಕ್ ಅನ್ನು ಗಮನಿಸಬಹುದು: https://jobsksrlps.karnataka.gov.in/
ಹುದ್ದೆಗಳ ವಿವರ:
ಕ್ಲಸ್ಟರ್ ಸೂಪರ್‌ವೈಸರ್, ಕ್ಲಸ್ಟರ್ ಸೂಪರ್‌ವೈಸರ್ ಸಿಲ್ಕ್, ಬ್ಲಾಕ್ ಮ್ಯಾನೇಜರ್- ನಾನ್‌ಫಾರ್ಮ್ ಲೈವ್ಲಿಹುಡ್, ಬ್ಲಾಕ್ ಮ್ಯಾನೇಜರ್- ಫಾರ್ಮ್ ಲೈವ್ಲಿಹುಡ್, ಕಚೇರಿ ಸಹಾಯಕ.
ಶೈಕ್ಷಣಿಕ ಅರ್ಹತೆ:
KSRLPS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ, 12 ನೇ ತರಗತಿ B.Sc, ಪದವಿ, M.Sc, ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ/ ಡಿಪ್ಲೊಮಾ, MBA, M.Com ಅನ್ನು ಪೂರ್ಣಗೊಳಿಸಿರಬೇಕು. ಹಾಗೆಯೇ ಕೆಲವು ಹುದ್ದೆಗಳಿಗೆ ಸಂಬಂಧಿತ ಕ್ಷೇತ್ರಗಳಲ್ಲಿ ಸೂಕ್ತ ಅನುಭವವಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
• ಮೊದಲನೆಯದಾಗಿ KSRLPS ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
• ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು https://jobsksrlps.karnataka.gov.in/ ಲಿಂಕ್ ಮೇಲೆ ಕ್ಲಿಕ್ ಮಾಡಿ.
• KSRLPS ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ (ಅನ್ವಯಿಸಿದರೆ) ಅಪ್‌ಲೋಡ್ ಮಾಡಿ.
• ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ Apply ಬಟನ್ ಮೇಲೆ ಕ್ಲಿಕ್ ಮಾಡಿ.