ಯಾದಗಿರಿ | ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ: ಮೂವರು ಕಾರ್ಮಿಕರು ಮೃತ್ಯು

Update: 2026-08-05 11:59 IST

ಯಾದಗಿರಿ: ತಾಲೂಕಿನ ಕಡೆ ಚೂರು ಬಾಡಿಯಾಲ ಕೈಗಾರಿಕಾ ಪ್ರದೇಶದಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ ಘಟ‌ನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಕಾರ್ಮಿಕರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾಗ ರಾಸಾಯನಿಕ ಸೋರಿಕೆಯಾಗಿದೆ ಎನ್ನಲಾಗಿದೆ. 

ಮೃತರು ತೆಲಂಗಾಣ ಮೂಲದವರು ಎಂದು ತಿಳಿದು ಬಂದಿದೆ. ‌ಘಟನೆಯಲ್ಲಿ ಮತ್ತೋರ್ವ ಕಾರ್ಮಿಕನ ಪರಸ್ಥಿತಿ ಚಿಂತಾಜನಕವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸ್ಥಳಕ್ಕೆ ಯಾದಗಿರಿ ಡಿವೈಎಸ್ಪಿ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಘಟನೆ ಸಂಬಂಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News